ತಿಪಟೂರು: ನಗರದ ರೈಲ್ವೆ ನಿಲ್ದಾಣದ ಸಮೀಪದ ಎಪಿಎಂಸಿ ಎರಡನೇ ಗೇಟ್ ಬಳಿ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಹೊನ್ನವಳ್ಳಿ ಗ್ರಾಮದ ಕುಮಾರ್ (35) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಬೆಂಗಳೂರು–ಹೊಸಪೇಟೆ ರೈಲು ಸಂಚಾರದ ವೇಳೆ ಈ ಘಟನೆ ಗಮನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ವ್ಯಕ್ತಿಯ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.
ಇದನ್ನೂ ಓದಿ: Mandya Student Death: ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು!
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಸಿ.ಜಿ. ಹಾಗೂ ಸಿಬ್ಬಂದಿಗಳಾದ ದೊರೆಸ್ವಾಮಿ,ಹರೀಶ್ ಎಚ್.ಜಿ. ಮತ್ತು ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವ್ಯಕ್ತಿಯ ಸಾವಿನ ಹಿಂದಿನ ನಿಖರ ಕಾರಣ ತಿಳಿದುಬರಬೇಕಿದ್ದು, ರೈಲ್ವೆ ಪೊಲೀಸರು ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.