ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala case: ಧರ್ಮಸ್ಥಳ ಕೇಸ್:‌ ದೂರುದಾರ ಸೂಚಿಸಿದ 6ನೇ ಸ್ಪಾಟ್‌ನಲ್ಲಿ ಮೂಳೆಗಳು ಪತ್ತೆ

mass burial case: ಎಸ್‌ಐಟಿಯು ಧರ್ಮಸ್ಥಳದ ಕಾಡುಪ್ರದೇಶದಲ್ಲಿ ಗುರುತಿಸಲಾದ ಪಾಯಿಂಟ್ ನಂಬರ್ 6ರಲ್ಲಿ ಹಿಟಾಚಿ ಯಂತ್ರವನ್ನು ಬಳಸಿ ಉತ್ಖನನ ಕಾರ್ಯವನ್ನು ಕೈಗೊಂಡಿತು. ಈ ಸ್ಥಳದಲ್ಲಿ ನಡೆದ ಒಂದೂವರೆ ಗಂಟೆಗಳ ತೀವ್ರ ಶೋಧದ ನಂತರ, ಮೂಳೆ ರೀತಿಯ ವಸ್ತುಗಳು ಪತ್ತೆಯಾಗಿವೆ.

ಮಂಗಳೂರು: ಧರ್ಮಸ್ಥಳ (Dharmasthala Case) ಗ್ರಾಮದಲ್ಲಿ (Dharmasthala mass burial case) ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ಅನಾಮಿಕ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಕೆಲವು ಮೂಳೆಗಳು ಅಥವಾ ಅಸ್ಥಿಪಂಜರದ ಭಾಗಗಳು ಪತ್ತೆಯಾಗಿವೆ ಎಂದು ಎಸ್‌ಐಟಿ (SIT) ಮೂಲಗಳು ತಿಳಿಸಿವೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ (exhumation) ನಡೆಯುತ್ತಿದ್ದು, ಮೂಳೆಗಳು ಪತ್ತೆಯಾಗಿವೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ. ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.

ಎಸ್‌ಐಟಿಯು ಧರ್ಮಸ್ಥಳದ ಕಾಡುಪ್ರದೇಶದಲ್ಲಿ ಗುರುತಿಸಲಾದ ಪಾಯಿಂಟ್ ನಂಬರ್ 6ರಲ್ಲಿ ಹಿಟಾಚಿ ಯಂತ್ರವನ್ನು ಬಳಸಿ ಉತ್ಖನನ ಕಾರ್ಯವನ್ನು ಕೈಗೊಂಡಿತು. ಈ ಸ್ಥಳದಲ್ಲಿ ನಡೆದ ಒಂದೂವರೆ ಗಂಟೆಗಳ ತೀವ್ರ ಶೋಧದ ನಂತರ, ಮೂಳೆ ರೀತಿಯ ವಸ್ತುಗಳು ಪತ್ತೆಯಾಗಿವೆ. ಅವುಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸಿ, ಫಾರೆನ್ಸಿಕ್ ವಿಶ್ಲೇಷಣೆಗಾಗಿ ರವಾನಿಸಲಾಗಿದೆ. ಈ ಕಳೇಬರವು ಮಾನವನದ್ದೇ ಎಂಬುದನ್ನು ಖಚಿತಪಡಿಸಲು ಡಿಎನ್‌ಎ ಪರೀಕ್ಷೆ ಸೇರಿದಂತೆ ವೈಜ್ಞಾನಿಕ ವಿಶ್ಲೇಷಣೆ ನಡೆಸಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಈ ಪತ್ತೆಯು ಪ್ರಕರಣದ ತನಿಖೆಯಲ್ಲಿ ಪ್ರಮುಖ ತಿರುವನ್ನು ತಂದಿದೆ. ಎಸ್‌ಐಟಿ ಈಗಾಗಲೇ 29 ಸದಸ್ಯರ ತಂಡವನ್ನು ಹೊಂದಿದ್ದು, ಇತ್ತೀಚೆಗೆ 9 ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ತಂಡವು ದೂರುದಾರನ ಹೇಳಿಕೆಯ ಆಧಾರದ ಮೇಲೆ ಗುರುತಿಸಲಾದ 13 ಸ್ಥಳಗಳಲ್ಲಿ ಉತ್ಖನನ ಕಾರ್ಯವನ್ನು ತೀವ್ರಗೊಳಿಸಿದೆ. ಈಗಾಗಲೇ 6 ಸ್ಥಳಗಳಲ್ಲಿ ಅಗೆತ ಕಾರ್ಯ ನಡೆದಿದ್ದು, ಇನ್ನೂ ಉಳಿದ 7 ಗುಂಡಿಗಳ ಉತ್ಖನನ ಕಾರ್ಯ ಬಾಕಿ ಇದೆ. ಇದೀಗ ಎಲ್ಲರ ಚಿತ್ತ ಉಳಿದ ಗುಂಡಿಗಳ ಮೇಲಿದೆ. ಇವತ್ತೇ 7 ಹಾಗೂ 8ನೇ ಪಾಯಿಂಟ್‌ನಲ್ಲಿಯೂ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ.

ಇದನ್ನೂ ಓದಿ: Dharmasthala burials case: ಧರ್ಮಸ್ಥಳ ಕೇಸ್‌ ಎಸ್‌ಐಟಿ ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಹರೀಶ್‌ ಕೇರ

View all posts by this author