ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Accident: ಬೊಲೆರೋ ಪಲ್ಟಿ: 10 ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಪಶ್ಚಿಮ ಬಂಗಾಳ ಮೂಲದ 10 ಮಂದಿ ಕಾರ್ಮಿಕರು ಹಳೆ ಉಪ್ಪಾರಹಳ್ಳಿಯಿಂದ ದೊಡ್ಡಬಳ್ಳಾ ಪುರದ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದ ಮುಂಭಾಗದ ಟೈರ್ ಏಕಾಏಕಿ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ರಸ್ತೆ ಬದಿಗೆ ಉರುಳಿ 3–4 ಬಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

ಗೌರಿಬಿದನೂರು: ರೈಲ್ವೆ ಕಾಮಗಾರಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಸುಮಾರು 10 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡ ಘಟನೆ ನಗರದ ಗುಂಡಾಪುರ ಹೊಸ ಬೈಪಾಸ್ ಸಮೀಪ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ 10 ಮಂದಿ ಕಾರ್ಮಿಕರು ಹಳೆ ಉಪ್ಪಾರಹಳ್ಳಿಯಿಂದ ದೊಡ್ಡಬಳ್ಳಾ ಪುರದ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನದ ಮುಂಭಾಗದ ಟೈರ್ ಏಕಾಏಕಿ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ರಸ್ತೆ ಬದಿಗೆ ಉರುಳಿ 3–4 ಬಾರಿ ಪಲ್ಟಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Bengaluru Accident: ಬಿಎಂಟಿಸಿ ಬಸ್‌ಗೆ ಮತ್ತೊಂದು ಬಲಿ; ಪತ್ನಿ ಕಣ್ಣೆದುರೇ ನವ ವಿವಾಹಿತ ದುರ್ಮರಣ!

ಅಪಘಾತದ ತೀವ್ರತೆಗೆ ಕಾರ್ಮಿಕರು ವಾಹನದೊಳಗೆ ಸಿಲುಕಿಕೊಂಡಿದ್ದು, ಸ್ಥಳೀಯರು ತಕ್ಷಣ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರ ವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅತಿವೇಗದ ಚಾಲನೆ ಹಾಗೂ ವಾಹನದ ಮುಂಭಾಗದ ಟೈರ್ ಒಡೆದಿರುವುದು ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.