ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Blast: ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟ: ಓರ್ವ ಸಾವು

ಕಚ್ಚಾ ಬಾಂಬ್ ತಯಾರಿಸುತ್ತಿದ್ದ ವೇಳೆ ಅದು ಸ್ಪೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಶನಿವಾರ ನಡೆದಿದೆ. ಉಸ್ಮಾನ್ ಬಿಸ್ವಾಸ್ ಎಂಬಾತ ಮೃತಪಟ್ಟಿದ್ದು, ಸ್ಪೋಟದ ಸದ್ದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟು ಮಾಡಿದೆ. ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕಚ್ಚಾ ಬಾಂಬ್ ಸ್ಫೋಟ: ಓರ್ವ ಸಾವು

-

ಕೋಲ್ಕತಾ: ಕಚ್ಚಾ ಬಾಂಬ್ (Crude bomb) ತಯಾರಿಸುತ್ತಿದ್ದಾಗ ಶನಿವಾರ ಬೆಳಗ್ಗೆ ಸ್ಫೋಟ (Bomb Blast) ಉಂಟಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನಲ್ಲಿ (Murshidabad) ನಡೆದಿದೆ. ಉಸ್ಮಾನ್ ಬಿಸ್ವಾಸ್ ಮೃತ ವ್ಯಕ್ತಿ. ಸ್ಫೋಟ ಉಂಟಾದ ತಕ್ಷಣವೇ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳದಿಂದ ಅಪಾರ ಪ್ರಮಾಣದ ಕಚ್ಚಾ ಬಾಂಬ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಣಿನಗರ ಪೊಲೀಸ್ ಠಾಣೆಯಲ್ಲಿ (Raninagar police station) ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ರಾಣಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೆಟಿಯಾನಿ ಪ್ರದೇಶದಲ್ಲಿ ನಡೆದಿದೆ. ಸ್ಪೋಟದ ಸದ್ದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟು ಮಾಡಿದೆ.

ಇದನ್ನೂ ಓದಿ: POK Protest: ಪಿಒಕೆ ಪ್ರತಿಭಟನಾಕಾರರ ಹತ್ಯೆ: ಪಾಕ್ ವಿರುದ್ಧ ಭಾರತ ವಾಗ್ದಾಳಿ

ಇನ್ನೊಂದು ಪ್ರಕರಣ

ಇದೇ ಜಿಲ್ಲೆಯ ಡೊಮ್ಕಲ್ ಪ್ರದೇಶದಲ್ಲಿ ಶುಕ್ರವಾರ ಬಾಂಬ್ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇದು ನಡೆದ ಕೇವಲ 24 ಗಂಟೆಗಳ ಅನಂತರ ಮುರ್ಷಿದಾಬಾದ್ ಜಿಲ್ಲೆಯ ರಾಣಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಫೋಟ ಉಂಟಾಗಿದೆ. ಇತ್ತೀಚಿನ ದಿನಗಳಲ್ಲಿ ಮುರ್ಷಿದಾಬಾದ್‌ನ ಹಲವಾರು ಕಡೆಗಳಲ್ಲಿ ನಿರಂತರ ಸ್ಫೋಟ ಉಂಟಾಗುತ್ತಿದ್ದು ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಸ್ಫೋಟಕಗಳ ಮೂಲ ಮತ್ತು ಅವುಗಳ ತಯಾರಿಕೆಯ ಹಿಂದಿನ ಉದ್ದೇಶದ ಬಗ್ಗೆ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.