#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Bomb Hoax: ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

ಅಪರಿಚಿತ ವ್ಯಕ್ತಿಗಳಿಂದ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರು ಏರ್​ಪೋರ್ಟ್​ ಪೊಲೀಸ್​ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ಗೆ ಭದ್ರತೆ ಹೆಚ್ಚಿಸಲಾಗಿದೆ.

ಏರ್‌ ಶೋ ನಡುವೆಯೇ ಬೆಂಗಳೂರು ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ

ಬೆಂಗಳೂರು ವಿಮಾನ ನಿಲ್ದಾಣ

ಹರೀಶ್‌ ಕೇರ ಹರೀಶ್‌ ಕೇರ Feb 12, 2025 9:38 AM

ಬೆಂಗಳೂರು: ಏರೋ ಇಂಡಿಯಾ ಶೋ (Aero India 2025, air show) ನಡೆಯುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Bengaluru International Airport) ಬಾಂಬ್ ಬೆದರಿಕೆ (Bomb hoax) ಬಂದಿದೆ. ದುಷ್ಕರ್ಮಿಗಳು ಫೆಬ್ರವರಿ 8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ (Bomb threat) ಹಾಕಿದ್ದಾರೆ. mahanteshs6699@proton.mi ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ನಾನು ಪತ್ರ ಬರೆದು ಅವರಿಂದ ಪ್ರತಿಕ್ರಿಯೆ ಕೋರಿದ್ದೇನೆ. ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಬೆಂಗಳೂರು, ಚೆನ್ನೈ, ಕೇರಳದಿಂದ ಬರುವ ಫ್ಲೈಟ್​​ಗಳ ಮೇಲೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಸಂಬಂಧ ಬೆಂಗಳೂರು ಏರ್​ಪೋರ್ಟ್​ ಪೊಲೀಸ್​ ಠಾಣೆಯಲ್ಲಿ BNS ಕಾಯ್ದೆ ಸೆಕ್ಷನ್ 125, 351, 353ರ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇನ್ನು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಏರ್​ಪೋರ್ಟ್​ಗೆ ಭದ್ರತೆ ಹೆಚ್ಚಿಸಲಾಗಿದೆ.

ಅತ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದರೆ, ಇತ್ತ ಯಲಹಂಕ ವಾಯುನೆಲೆಯಲ್ಲಿ ಏರ್​ ಶೋ ನಡೆಯುತ್ತಿದೆ. ಈ ಎರಡು ಇವೆಂಟ್​ಗೆ ಹಲವಾರು ಅಂತಾರಾಷ್ಟ್ರೀಯ ಪ್ರತಿನಿಧಿಗಳು, ರಕ್ಷಣಾ ಕಂಪನಿಗಳು ಮತ್ತು ವಾಯುಯಾನ ತಜ್ಞರು ಆಗಮಿಸಿದ್ದಾರೆ. ಇದರ ಮಧ್ಯೆ ಈ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದರಿಂದ ಯಲಹಂಕ ವಾಯುನೆಲೆ ಸುತ್ತಮುತ್ತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಯಲಹಂಕ ವಾಯುನೆಲೆ ಬಳಿ ಹೆಚ್ಚುವರಿ ಭದ್ರತಾ ಸಿಬ್ಬಂದಿ, ಡ್ರೋನ್ ಮೇಲ್ವಿಚಾರಣೆ ಮತ್ತು ಪ್ರಮುಖ ಪ್ರವೇಶ ದ್ವಾರಗಳಲ್ಲಿ ತಪಾಸಣೆಯೊಂದಿಗೆ ಕಣ್ಗಾವಲು ಇಟ್ಟಿದ್ದು, ಏರ್ ಶೋ ಪ್ರದರ್ಶನ ವೇಳೆ ಯಾವುದೇ ಅಡೆತಡೆಗಳಿಲ್ಲದೆ ಸರಾಗವಾಗಿ ನಡೆಯುವಂತೆ ಅಧಿಕಾರಿಗಳು ನೋಡಿಕೊಂಡಿದ್ದಾರೆ.

ಇದನ್ನೂ ಓದಿ: Aero India 2025: ಬೆಂಗಳೂರು ಏರ್‌ ಶೋ: ಬೆಂಗಳೂರು-ಹೈದರಾಬಾದ್‌ ರಸ್ತೆಯಲ್ಲಿ ಫುಲ್‌ ಟ್ರಾಫಿಕ್‌ ಜಾಮ್!