ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karur Stampede Tragedy: ಇನ್ನೂ ಆರಿಲ್ಲ ಕಾಲ್ತುಳಿತದ ಕಿಚ್ಚು; ವಿಜಯ್‌ ಮನೆಗೆ ಮತ್ತೆ ಬಾಂಬ್‌ ಬೆದರಿಕೆ

ಚೆನ್ನೈಯಲ್ಲಿರುವ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವ ಕುರಿತು ವರದಿಯಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣ ಬಳಿಕ ತಮಿಸಿನಾಡಿನಲ್ಲಿ ಪರಿಸ್ಥಿತಿ ಅಸ್ತವ್ಯಸ್ತ ಆಗಿದ್ದು, ಇದೀಗ ಬಾಂಬ್ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ವಿಜಯ್

ಚೆನ್ನೈ: ಕರೂರ್ ಕಾಲ್ತುಳಿತ (Karur Stampede) ಸಂಭವಿಸಿದ ಕೆಲ ದಿನಗಳ ನಂತರ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ)(TVK) ಮುಖ್ಯಸ್ಥ ವಿಜಯ್(Actor Vijay) ಅವರ ಚೆನ್ನೈ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ(Bomb Treat) ಕರೆ ಬಂದಿದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, ಹಲವರು ಗಾಯಗೊಂಡ ನಂತರ ವಿಜಯ್ ವಿರುದ್ಧ ಟೀಕೆಗಳು ಕೇಳಿಬರುತ್ತಿರುವ ನಡುವೆಯೇ ಈ ಕರೆ ಬಂದಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಬಾಂಬ್ ಬೆದರಿಕೆ ಕರೆ ಬಂದ ತಕ್ಷಣ ಪೊಲೀಸ್ ಪಡೆ ಸ್ಥಳ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ ಮತ್ತು ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಹುಸಿ ಕರೆ ಮಾಡಿದವರು ಯಾರು? ಅವರ ಉದ್ದೇಶವೇನ್ನು ಎಂಬುವುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಓದಿ: Ratan Tata: ರತನ್ ಟಾಟಾ ಪುಣ್ಯತಿಥಿ; ಕೈಗಾರಿಕೋದ್ಯಮಿಯ ಯಶೋಗಾಥೆಯ ಒಂದು ಮೆಲುಕು

ವಿಜಯ್ ಅವರ ಮನೆಯನ್ನು ಗುರಿಯಾಗಿಸಿಕೊಂಡು ಬಂದಿರುವ ಬಾಂಬ್ ಬೆದರಿಕೆಗೂ ಮೊದಲು ಕಳೆದ ಎರಡು ವಾರಗಳಿಂದ ಪ್ರಮುಖ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ವ್ಯಾಪಕ ಬೆದರಿಕೆಗಳು ಬಂದಿವೆ. ಒಂದು ವಾರದ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೂ ಬಾಂಬ್ ಬೆದರಿಕೆ ಬಂದಿರುವುದಾಗಿ ವರದಿಗಳು ತಿಳಿಸಿವೆ.

ಇಷ್ಟೇ ಅಲ್ಲದೇ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ, ಡಿಎಂಕೆ ಸಂಸದೆ ಕನಿಮೋಳಿ, ನಟಿ ತ್ರಿಶಾ, ಹಾಸ್ಯನಟ ಮತ್ತು ನಟ ಎಸ್.ವಿ.ಶೇಖರ್ ಹಾಗೂ ಕಮಲಾಲಯದಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಗೂ ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಈ ವಾರದ ಆರಂಭದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಚೆನ್ನೈನ ಅಣ್ಣಾ ಸಲೈನಲ್ಲಿರುವ ದಿ ಹಿಂದೂ ಪತ್ರಿಕೆಯ ಕಚೇರಿಗೂ ಬಾಂಬ್ ಬೆದರಿಕೆ ಬಂದಿದೆ.

ಕಳೆದ ಕೆಲ ವಾರಗಳಲ್ಲಿ ಧಾರ್ಮಿಕ ಸ್ಥಳಗಳು, ಖ್ಯಾತ ಕಲಾವಿದರ ಮನೆಗಳು ಹಾಗೂ ವಿದೇಶಿ ದೂತವಾಸಗಳನ್ನು ಗುರಿಯಾಗಿಸಿಕೊಂಡು ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ತಮಿಳುನಾಡು ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳವು (BDDS) ಕಟ್ಟೆಚ್ಚರ ವಹಿಸಿದೆ ಎಂದು ವರದಿಗಳು ತಿಳಿಸಿವೆ.

“ಈ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡುವ ಆರೋಪಿಗಳು ಫೇಕ್ ಐಪಿ ಅಡ್ರೆಸ್ ಬಳಸುತ್ತಿರುವುದರಿಂದ ಅವರನ್ನು ಪತ್ತೆ ಹಚ್ಚುವುದು ಕಷ್ಟವಾಗುತ್ತಿದೆ. ಆರೋಪಿಗಳು ಇಂತಹ ಸಂದೇಶಗಳನ್ನು ಕಳಿಸುಲು ಹೆಚ್ಚಾಗಿ ಗೌಪ್ಯತೆ-ಕೇಂದ್ರಿತ ವೆಬ್ ಬ್ರೌಸರ್‌ಗಳು ಮತ್ತು ಬಹು ವಿಪಿಎನ್‌ಗಳನ್ನು ಬಳಸುತ್ತಾರೆ,” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನೂ ಕರೂರ್ ಕಾಲ್ತುಳಿತ ಪ್ರಕರಣದ ಸಂತ್ರಸ್ತರಿಗೆ ವಿಜಯ್ ಅವರೇ ವಿಡಿಯೋ ಕಾಲ್ ಮಾಡಿ ಸಾಂತ್ವನ ಹೇಳಿದ್ದು, ನೆರವಿನ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.