ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb threat: ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ಗೆ ಬಾಂಬ್‌ ಬೆದರಿಕೆ

ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್‌ ಬೆದರಿಕೆ ಇಮೇಲ್‌ಗಳ ಹಾವಳಿ ಹೆಚ್ಚಿದೆ. ಎಲ್ಲವೂ ಹುಸಿ ಸಂದೇಶಗಳೇ ಆಗಿದ್ದರೂ ರಿಸ್ಕ್‌ ತೆಗೆದುಕೊಳ್ಳಲಾಗದೆ ಕಟ್ಟೆಚ್ಚರ ತೆಗೆದುಕೊಳ್ಳಲಾಗುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡ ಬಳಿಕ ಇಂಥ ಬೆದರಿಕೆ ಕರೆಗಳನ್ನು ಹೆಚ್ಚಿನ ಎಚ್ಚರಿಕೆಯಿಂದ ಪರೀಕ್ಷಿಸಲಾಗುತ್ತಿದೆ.

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್‌ಗೆ (city civil court) ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ (bengaluru) ಸಿಟಿ ಸಿವಿಲ್ ಕೋರ್ಟ್‌ ಆವರಣದಲ್ಲಿ ಬಾಂಬ್ (bomb threat) ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಬಂದಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಹುಸಿ ಬಾಂಬ್‌ ಬೆದರಿಕೆ ಇಮೇಲ್‌ಗಳ ಹಾವಳಿ ಹೆಚ್ಚಿದೆ. ಎಲ್ಲವೂ ಹುಸಿ ಸಂದೇಶಗಳೇ ಆಗಿದ್ದರೂ ರಿಸ್ಕ್‌ ತೆಗೆದುಕೊಳ್ಳಲಾಗದೆ ಕಟ್ಟೆಚ್ಚರ ತೆಗೆದುಕೊಳ್ಳಲಾಗುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡ ಬಳಿಕ ಇಂಥ ಬೆದರಿಕೆ ಕರೆಗಳನ್ನು ಹೆಚ್ಚಿನ ಎಚ್ಚರಿಕೆಯಿಂದ ಪರೀಕ್ಷಿಸಲಾಗುತ್ತಿದೆ.

ಇತ್ತೀಚೆಗೆ ಬೆಂಗಳೂರು ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳಿಗೆೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕಚೇರಿಗೆ ಹಾಗೂ ಹಲವು ಶಾಲೆಗಳಿಗೆ ಇಂಥ ಹುಸಿ ಬಾಂಬ್‌ ಬೆದರಿಕೆಗಳು ಬಂದಿದ್ದವು.

ಇದನ್ನೂ ಓದಿ: Bomb threat: ಕಲಬುರಗಿ ಕೇಂದ್ರ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ; ಬಾಂಬ್ ಸ್ಕ್ವಾಡ್‌ನಿಂದ ತಪಾಸಣೆ

ಹರೀಶ್‌ ಕೇರ

View all posts by this author