ಚಾಮರಾಜನಗರ : ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ(Chamarajangar DC Office)ಯನ್ನು ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಇ-ಮೇಲ್‌ನಲ್ಲಿ ಸಂದೇಶ ರವಾನಿಸಿದ್ದು, ಇಂದು ಮಧ್ಯಾಹ್ನ 3ಗಂಟೆಯೊಳಗೆ ಬಾಂಬ್(Bomb Threat) ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ. 3 ಗಂಟೆಯೊಳಗೆ ಚಾಮರಾಜನಗರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಅಪರಿಚಿತರು ಇ-ಮೇಲ್ ಸಂದೇಶ ರವಾನಿಸಿದ್ದಾರೆ. ಇ-ಮೇಲ್ ಸಂದೇಶದ ಬೆನ್ನಲ್ಲೇ ಚಾಮರಾಜನಗರ ಎಸ್ ಪಿ ಕವಿತಾಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇ-ಮೇಲ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Pinarayi Vijayan : ಕೇರಳ ಸಿಎಂ ಪಿಣರಾಯಿ ವಿಜಯನ್ ಕಚೇರಿ, ನಿವಾಸಕ್ಕೆ ಬಾಂಬ್ ಬೆದರಿಕೆ
ಎರಡು ದಿನಗಳ ಹಿಂದೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿ ಮತ್ತು ಅವರ ಅಧಿಕೃತ ನಿವಾಸ ಕ್ಲಿಫ್ ಹೌಸ್‌ಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕರೆ ಬಂದಿತ್ತು. ತಿರುವನಂತಪುರಂನಲ್ಲಿರುವ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸಕ್ಕೆ ಬಾಂಬ್ ಬೆದರಿಕೆ ಇಮೇಲ್ ಮೂಲಕ ಬಂದಿದ್ದು, ಕೇರಳ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದರು. ಮುಖ್ಯಮಂತ್ರಿಗಳ ನಿವಾಸದದಲ್ಲಿ ಸ್ನಿಫರ್ ನಾಯಿಗಳು ಮತ್ತು ವಿಶೇಷ ತಂಡಗಳೊಂದಿಗೆ, ಸಂಪೂರ್ಣ ತಪಾಸಣೆ ನಡೆಸಿದ್ದರು. ಆದಾಗ್ಯೂ, ಎರಡೂ ಸ್ಥಳಗಳಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ.