ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bomb Threat: ಮುಖ್ಯಮಂತ್ರಿ, ಡಿಸಿಎಂ ನಿವಾಸಗಳಿಗೆ ಬಾಂಬ್‌ ಬೆದರಿಕೆ

CM Siddaramaiah: ಈ ಮೊದಲು ಕರ್ನಾಟಕ ಹೈಕೋರ್ಟ್‌ಗೂ ಇಂಥ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ, ಖಾಸಗಿ ಶಾಲೆಗಳಿಗೆ ಇಂಥ ಬೆದರಿಕೆ ಬರುವುದು ಮಾಮೂಲಾಗಿದೆ. ಇದೀಗ ಸಿಎಂ, ಡಿಸಿಎಂ ಮನೆಗಳನ್ನೂ ಕಿಡಿಗೇಡಿಗಳು ಟಾರ್ಗೆಟ್‌ ಮಾಡಿದ್ದಾರೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಮನೆ ಸ್ಪೋಟಿಸುವುದಾಗಿ ಈಮೇಲ್ ಬೆದರಿಕೆ ಸಂದೇಶ (Bomb Threat) ಬಂದಿದೆ. ಆರು ಆರ್‌ಡಿಎಕ್ಸ್ ಫಿಕ್ಸ್ ಮಾಡಿದ್ದೇವೆ ಎಂದು dkshivakumar1 ಜಿಮೇಲ್‌ಗೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ತಕ್ಷಣ ಬಾಂಬ್ ಸ್ಕ್ವಾಡ್ ಸಿಎಂ ಹಾಗೂ ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

arnaashinkumar ಎಂಬ ಜಿಮೇಲ್‌ ಐಡಿಯಿಂದ ಈ ಬೆದರಿಕೆ ಸಂದೇಶ ಬಂದಿದೆ. ಇದು ಹುಸಿ ಬಾಂಬ್ ಕರೆ ಎಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಅಶ್ವಥ್ ನಾರಾಯಣಸ್ವಾಮಿ ಎಂಬವರ ದೂರು ಆಧರಿಸಿ ಕೇಸ್ ದಾಖಲಾಗಿದೆ.

ಈ ಮೊದಲು ಹೈಕೋರ್ಟ್‌ಗೂ ಇಂಥ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಬೆಂಗಳೂರು ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ, ಖಾಸಗಿ ಶಾಲೆಗಳಿಗೆ ಇಂಥ ಬೆದರಿಕೆ ಬರುವುದು ಮಾಮೂಲಾಗಿದೆ. ಇದೀಗ ಸಿಎಂ, ಡಿಸಿಎಂ ಮನೆಗಳನೂ ಕಿಡಿಗೇಡಿಗಳು ಟಾರ್ಗೆಟ್‌ ಮಾಡಿದ್ದಾರೆ.

ಇದನ್ನೂ ಓದಿ: Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ, ಆಡಿಯೋ ರೆಕಾರ್ಡ್‌ ರಿಲೀಸ್‌ ಮಾಡಿದ ಖರ್ಗೆ

ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಗುರುತು ಪತ್ತೆ

ಬೆಂಗಳೂರು: ಆರ್‌ಎಸ್‌ಎಸ್‌ (RSS) ಕುರಿತು ನೀಡಿದ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಫೋನ್‌ ಮಾಡಿ ಬೆದರಿಕೆ (threat call) ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ ಮೂಲದ ದಾನೇಶ್ ನರೋಣ ಎಂದು ಗುರುತಿಸಲಾಗಿದೆ.

ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಇದನ್ನು ರೆಕಾರ್ಡ್‌ ಮಾಡಿಕೊಂಡಿದ್ದ ಸಚಿವರು, ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಬಹಿರಂಗಪಡಿಸಿದ್ದರು. ಆದರೆ ಈ ಕುರಿತು ಪೊಲೀಸ್ ದೂರು ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬೆಂಗಳೂರು ಪೊಲೀಸರು ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.

ಹರೀಶ್‌ ಕೇರ

View all posts by this author