ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

IPL Betting Racket: ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

Belagavi News: ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದಾಗ ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಶಾಸ್ತ್ರಿ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬಂಧಿತ ಆರೋಪಿ ಸಾಹೀಲ್ ಪಾಟೀಲ್.

ಬೆಳಗಾವಿ: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ದಂಧೆ (IPL Betting Racket) ನಡೆಸುತ್ತಿದ್ದ ಬುಕ್ಕಿಯನ್ನು ಕ್ಯಾಂಪ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಶಾಸ್ತ್ರಿ ನಗರದ ನಿವಾಸಿ ಸಾಹೀಲ್ ಪಾಟೀಲ್ (23) ಎಂಬಾತನನ್ನು ಬಂಧಿಸಲಾಗಿದೆ. ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದಾಗ ಆರೋಪಿಯನ್ನು ಬಂಧಿಸಲಾಗಿದೆ.

ಮೊಬೈಲ್‌ನಲ್ಲೇ ಪ್ರತಿ ಕ್ಷಣದ ಆಟ ಮೇಲೆ ಬೆಟ್ಟಿಂಗ್ ಪಡೆಯುತ್ತಿದ್ದ ಆರೋಪಿಯಿಂದ ಮೊಬೈಲ್, 12,900 ಹಣ ಜಪ್ತಿ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಮಾದಕ ವಸ್ತುಗಳ ಸಾಗಣೆ: ಬಂಟ್ವಾಳದಲ್ಲಿ ಇಬ್ಬರು ಆರೋಪಿಗಳ ಬಂಧನ, 46 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ

ಬಂಟ್ವಾಳ: ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ಅವರಿಂದ 46 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ಮೊಬೈಲ್ ಫೋನ್, ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಮಂಚಿ ಗ್ರಾಮದ ಪಂಜಾಲ ಎಂಬಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಪುತ್ತೂರು ಕಲೆಂಬಿ ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಮೊಹಮದ್ ಶಾಹೀಂ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 42 ಲಕ್ಷದ 30 ಸಾವಿರ ರೂಪಾಯಿ ಮೌಲ್ಯದ 423 ಗ್ರಾಂ ಎಂಡಿಎಂ ಮತ್ತು ಮೂರೂವರೆ ಲಕ್ಷ ಮೌಲ್ಯದ ಬೊಲೆರೋ ವಾಹನ, 35,000 ರೂ. ಮೌಲ್ಯದ ಐಫೋನ್, 5,000 ರೂ. ಮೌಲ್ಯದ ವಿವೋ ಮೊಬೈಲ್, 5000 ರೂ. ಮೌಲ್ಯದ ಸಾಮ್ ಸಾಂಗ್ ಮೊಬೈಲನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Ramanagara News: ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮನ ವಿರುದ್ಧ ದೂರು ದಾಖಲು

ಬೊಲೆರೋ ವಾಹನದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನೊಂದಿಗೆ ಬಂಟ್ವಾಳ ಕಡೆಗೆ ಬರುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮಾರ್ನಬೈಲು ಮಂಚಿ ಗ್ರಾಮದ ಪಂಜಾಲ ಕ್ರಾಸ್ ಎಂಬಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸಿದ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.