ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆಂಧ್ರ ಪ್ರದೇಶದಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಬಸ್: 7 ಮಂದಿ ಸಾವು

ಆಂಧ್ರಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಪಲ್ನಾಡು ಜಿಲ್ಲೆಯ ಕಲಾ ಮಂದಿರ ಜಂಕ್ಷನ್ ಬಳಿ ಆಟೋರಿಕ್ಷಾಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆಘಾತ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಭೀಕರ ರಸ್ತೆ ಅಪಘಾತ: 7 ಮಂದಿ ಸಾವು

ಸಂಗ್ರಹ ಚಿತ್ರ -

ಆಂಧ್ರಪ್ರದೇಶ: ತಿರುಪತಿಗೆ (tirupati bus) ಹೋಗುತ್ತಿದ್ದ ಖಾಸಗಿ ಬಸ್ಸೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ (road accident) ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದಲ್ಲಿ (Andrapradesh crime) ಗುರುವಾರ ನಡೆದಿದೆ. ಪಲ್ನಾಡು ಜಿಲ್ಲೆಯ ಕಲಾ ಮಂದಿರ ಜಂಕ್ಷನ್ ಬಳಿ ಈ ದುರಂತ (Crime news) ಸಂಭವಿಸಿದೆ. ಚಾಲಕರ ವಿರುದ್ಧ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ನರಸರಾವ್‌ಪೇಟೆ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಎಂ ಹನುಮಂತ ರಾವ್ ತಿಳಿಸಿದ್ದಾರೆ.

ಚಿಲಕಲುರಿಪೇಟೆ ಬಳಿಯ ಬೈಪಾಸ್ ತಲುಪಿದ ತಿರುಪತಿಗೆ ಹೋಗುತ್ತಿದ್ದ ಖಾಸಗಿ ಬಸ್ ಪ್ರಯಾಣಿಕರೊಬ್ಬರನ್ನು ಕರೆದುಕೊಂಡು ಮುಂದೆ ಸಾಗುವಾಗ ಕಲಾ ಮಂದಿರ ಜಂಕ್ಷನ್ ಬಳಿ ಮುಂಜಾನೆ 1 ಗಂಟೆ ಸುಮಾರಿಗೆ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎಂದರು.

ಜಿಮ್‌ನಿಂದ ಹೊರ ಬರುತ್ತಿದ್ದ ಗಾಯಕ ಅಂಕಿತ್ ಬಲ್ಯಾನ್ ಮೇಲೆ ಗುಂಡಿನ ಮಳೆಗೆರೆದು ಹತ್ಯೆ; ಬೈಕ್‌ನಲ್ಲಿ ಪರಾರಿಯಾದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರಿಂದ ಕಾರ್ಯಾಚರಣೆ

ಆಟೋ ರಸ್ತೆಯ ತಪ್ಪು ಬದಿಯಲ್ಲಿಬಂದಿದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಚಲಿಸುತ್ತಿದ್ದ ಬಸ್‌ಗೆ ಅಡ್ಡ ಬಂದಿದೆ. ಇದರ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇತರ ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಚಾಲಕರ ವಿರುದ್ಧ ಅತಿ ವೇಗ ಅಥವಾ ನಿರ್ಲಕ್ಷ್ಯದ ಚಾಲನೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

ಮೃತರನ್ನು ಚಿಲಕಲುರಿಪೇಟೆ ಮಂಡಲದ ವೇಲೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಟೂರು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿ ಅಧಿಕಾರಿಗಳು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮಾಹಿತಿ ನೀಡಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಮತ್ತು ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Madikeri Accident: ಮಡಿಕೇರಿ ಬಳಿ ಪ್ರವಾಸಿಗರಿದ್ದ ಟಿಟಿ ಮೇಲೆ ಉರುಳಿದ ಲಾರಿ; 8 ಮಂದಿಗೆ ಗಾಯ

ಘಟನೆ ಕುರಿತು ಪ್ರತಿಕ್ರಿಯಿಸಿರುವ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ, ಇದು ಅತ್ಯಂತ ಹೃದಯ ವಿದ್ರಾವಕ ಘಟನೆ. ಮೃತರೆಲ್ಲರೂ ಒಂದೇ ಗ್ರಾಮಕ್ಕೆ ಸೇರಿದವರು. ಇದು ನೋವನ್ನು ಇನ್ನಷ್ಟು ಹೆಚ್ಚು ಮಾಡಿದೆ. ಗಾಯಾಳುಗಳಿಗೆ ತಕ್ಷಣ ಮತ್ತು ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಅಪಘಾತದ ಕಾರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಅಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಬಲವಾದ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದರು.