ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಹಿಮಾಚಲ ಪ್ರದೇಶದಲ್ಲಿ ಆಳವಾದ ಕಮರಿಗೆ ಬಿದ್ದ ಬಸ್: 12 ಸಾವು, 35 ಮಂದಿಗೆ ಗಾಯ

ಹಿಮಾಚಲ ಪ್ರದೇಶದಲ್ಲಿ ಬಸ್ಸೊಂದು ಆಳವಾದ ಕಮರಿಗೆ ಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಸಿರ್ಮೌರ್ ಜಿಲ್ಲೆಯ ಹರಿಪುರ್ಧರ್ ಪ್ರದೇಶದಲ್ಲಿ ಕಡಿದಾದ ಇಳಿಜಾರನ್ನು ದಾಟುವಾಗ ಬಸ್ ರಸ್ತೆಯಿಂದ ಜಾರಿ 400 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಬಸ್

(ಸಂಗ್ರಹ ಚಿತ್ರ) -

ಶಿಮ್ಲಾ: ಬಸ್ಸೊಂದು (Bus accident) ಆಳವಾದ ಕಮರಿಗೆ ಬಿದ್ದು 12 ಮಂದಿ ಸಾವನ್ನಪ್ಪಿದ್ದು, 35 ಮಂದಿ ಗಾಯಗೊಂಡ ಘಟನೆ ಶುಕ್ರವಾರ ಹಿಮಾಚಲ ಪ್ರದೇಶದಲ್ಲಿ (Himachal Pradesh) ನಡೆದಿದೆ. ಸೋಲನ್ ನಿಂದ ರಾಜ್‌ಗಢ, ಹರಿಪುರ್ಧರ್ ಮೂಲಕ ಕುಪ್ವಿಗೆ ಹೋಗುವ ದಾರಿಯಲ್ಲಿ ಸಿರ್ಮೌರ್ ಜಿಲ್ಲೆಯ ಹರಿಪುರ್ಧರ್ ಪ್ರದೇಶದಲ್ಲಿ ಕಡಿದಾದ ಇಳಿಜಾರನ್ನು ದಾಟುತ್ತಿದ್ದ ಖಾಸಗಿ ಬಸ್ ರಸ್ತೆಯಿಂದ ಜಾರಿ ಸುಮಾರು 400 ಮೀಟರ್ ಆಳದ ಕಂದಕಕ್ಕೆ ಉರುಳಿ (Bus falls into deep gorge) ಬಿದ್ದಿದೆ. ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಕ್ಷಣಾ ಕಾರ್ಯಾಚರಣೆ ತುಂಬಾ ಕಠಿಣವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಿರ್ಮೌರ್ ಜಿಲ್ಲೆಯ ಹರಿಪುರ್ಧರ್ ಪ್ರದೇಶದಲ್ಲಿ ಕಡಿದಾದ ಇಳಿಜಾರಿನಲ್ಲಿ ಕಮರಿಗೆ ಬಿದ್ದ ಖಾಸಗಿ ಬಸ್ ಪ್ರಯಾಣಿಕರಿಂದ ತುಂಬಿತ್ತು. ಇದರಲ್ಲಿ ಸರಿಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಅಪಘಾತದ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Road Rage: ಬೆಂಗಳೂರಿನಲ್ಲಿ ರೋಡ್‌ ರೇಜ್‌, ಡೆಲಿವರಿ ಬಾಯ್‌ ಮೇಲೆ ಅಮಾನುಷ ಹಲ್ಲೆ, ವಿಡಿಯೋ ವೈರಲ್

ಈ ಪ್ರದೇಶದಲ್ಲಿನ ಪರ್ವತ ರಸ್ತೆಗಳು ಕಿರಿದಾಗಿದ್ದು, ತೀಕ್ಷ್ಣವಾದ ತಿರುವು ರಸ್ತೆಯಲ್ಲಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಕಮರಿಗೆ ಉರುಳಿರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡ ಪ್ರಯಾಣಿಕರಲ್ಲಿ ಹೆಚ್ಚಿನವರು ಸ್ಥಳೀಯಾರಾಗಿದ್ದು, ಅವರನ್ನು ಹರಿಪುರ್ಧರ್‌ನಲ್ಲಿರುವ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.



ಅಪಘಾತದ ಬಳಿಕ ಮಾಹಿತಿ ಬಂದ ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ತುರ್ತು ಸೇವಾ ತಂಡ ಮೊದಲು ಸ್ಥಳಕ್ಕೆ ಧಾವಿಸಿತ್ತು. ಸ್ಥಳೀಯರ ಸಹಾಯದಿಂದ ಜಿಲ್ಲಾಡಳಿತ ತಂಡಗಳು, ಪೊಲೀಸ್ ಸಿಬ್ಬಂದಿ ಮತ್ತು ಸ್ವಯಂಸೇವಕರು ಮೃತರು ಮತ್ತು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ತೀವ್ರ ಸಂತಾಪ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜೀವ ಕಸಿದ ಮೂಢ ನಂಬಿಕೆ; ಮಗುವಿನ ಅನಾರೋಗ್ಯಕ್ಕೆ ನೆರೆಮನೆಯ ಮಹಿಳೆಯೇ ಕಾರಣ ಎಂದು ಆರೋಪಿಸಿ ಹೊಡೆದು ಕೊಂದ ಪಾಪಿಗಳು

ಹರಿಪುರ್ ಧಾರ್ ಬಳಿ ಸಂಭವಿಸಿದ ಅತ್ಯಂತ ಭೀಕರ ಬಸ್ ಅಪಘಾತದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಈ ಕಷ್ಟದ ಸಮಯದಲ್ಲಿ ಪೀಡಿತ ಕುಟುಂಬಗಳಿಗೆ ಬೆಂಬಲ ಸಿಗುತ್ತದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.