ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Kidnap case: ಉದ್ಯಮಿಯನ್ನು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆ

ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಉದ್ಯಮಿಯನ್ನು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Feb 19, 2025 10:23 AM

ಬೆಳಗಾವಿ: ಬೆಳಗಾವಿಯಲ್ಲಿ (Belagavi crime news) ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು (businessman) ದುಷ್ಕರ್ಮಿಗಳು ಅಪಹರಣ (kidnap case) ಮಾಡಿದ್ದಾರೆ. ಜೊತೆಗೆ 5 ಕೋಟಿ ರೂ. ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸವರಾಜ ತಳವಾಡ (46) ಎಂಬುವವರನ್ನು ಫೆ.14 ರಂದು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿದ್ದಾರೆ.

ಅಪಹರಣಕಾರರು ಉದ್ಯಮಿ ಕುಟುಂಬ ಸದಸ್ಯರಿಗೆ ಕರೆ ಮಾಡಿದ ಗ್ಯಾಂಗ್ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಗೆ ಉದ್ಯಮಿ ಕುಟುಂಬದವರು ದೂರು ನೀಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಉದ್ಯಮಕ್ಕೆ ಸಂಬಂಧಿಸಿದವರು, ಹಳೆಯ ದ್ವೇಷ ಹೊಂದಿರುವವರು, ಇವರ ಹಣದ ವ್ಯವಹಾರದ ಬಗ್ಗೆ ಮಾಹಿತಿ ಇದ್ದವರು- ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಹೃದಯಾಘಾತದಿಂದ ಸತ್ತ ಕಾರ್ಮಿಕನ ಶವ ನಾಯಿಯಂತೆ ಎಳೆದೊಯ್ದರು!

ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಫ್ಯಾಕ್ಟರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಕಾರ್ಮಿಕನ ಮೃತದೇಹವನ್ನು ಸತ್ತ ನಾಯಿಯ ಹೆಣದಂತೆ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದರು. ಸಿಬ್ಬಂದಿಗಳು ಕಾರ್ಮಿಕನ ಮೃತದೇಹವನ್ನು ನಾಯಿಯ ಹೆಣ ಒಯ್ಯುವಂತೆ ಎಳೆದೊಯ್ದರು. ಮೃತರನ್ನು ಬಿಹಾರ ಮೂಲದ ಚಂದನ್ ಸಿಂಗ್ (35) ಎಂದು ಗುರುತಿಸಲಾಗಿದೆ.

ಚಂದನ್ ಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವಾಗ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಂದನ್ ಸಿಂಗ್ ಮೃತದೇಹವನ್ನು ಸಿಬ್ಬಂದಿಗಳು ಪ್ರಾಣಿ ತರ ಎಳೆದುಕೊಂಡು ಹೋಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Goa Murder Case: ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ