ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ACB Raid: ಲಂಚ ಪಡೆಯುವಾಗ ಎಸಿಬಿ ಬಲೆಗೆ: ಲಂಚಕ್ಕೆ ಕೈ ಚಾಚಿದ ಆರೋಗ್ಯಾಧಿಕಾರಿ ಸೇವೆಯಿಂದ ವಜಾ

ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ವೆಂಕಟೇಶಮೂರ್ತಿ ಅವರು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಅವರ ವಿರುದ್ಧ ಇಲಾಖಾ ಕ್ರಮಕ್ಕೆ ಮುಂದಾ ಗಲಾಗಿದೆ.

ಚಿಕ್ಕಬಳ್ಳಾಪುರ: ಲಂಚಕ್ಕೆ ಬೇಡಿಕೆ ಇಟ್ಟು, ಹಣ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದ ಶಿಡ್ಲಘಟ್ಟ ತಾಲ್ಲೂಕು ಆರೋಗ್ಯಾಧಿಕಾರಿ ವೆಂಕಟೇಶಮೂರ್ತಿ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅಡಿ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ.

ಶಿಡ್ಲಘಟ್ಟ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟೇಶಮೂರ್ತಿ, ಈ ಹಿಂದೆ ನಿಯೋಜನೆ ಮೇರೆಗೆ ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 

ವಸತಿ ನಿಲಯಗಳಿಗೆ ಅಗತ್ಯ ಸಾಮಗ್ರಿಗಳ ಸರಬರಾಜು ಸಂದರ್ಭದಲ್ಲಿ ಗುತ್ತಿಗೆದಾರರಿಂದ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 5 ಲಕ್ಷ ಪಡೆದುಕೊಂಡ ಬಳಿಕ, ಮತ್ತೆ 2 ಲಕ್ಷ ನೀಡುವಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: Lokayukta Raid: ಖಾತೆ ಮಾಡಲು ₹1 ಲಕ್ಷ ಲಂಚ: ಸಿಕ್ಕಿಬಿದ್ದ ಆರ್.ಐ. ನಾಗೇಶ್

ಈ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ವೆಂಕಟೇಶಮೂರ್ತಿ ಅವರು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆ ಹಾಗೂ ಲಭ್ಯ ದಾಖಲೆಗಳ ಆಧಾರದ ಮೇಲೆ ಅವರ ವಿರುದ್ಧ ಇಲಾಖಾ ಕ್ರಮಕ್ಕೆ ಮುಂದಾಗಲಾಗಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿ ವೆಂಕಟೇಶಮೂರ್ತಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆದೇಶವಾಗಿದ್ದು, ಆರೋಗ್ಯ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ತಕ್ಷಣ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಲಂಚ ಸ್ವೀಕಾರ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಸೇವೆಯಿಂದಲೇ ವಜಾಗೊಂಡಿರು ವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರದ ಕಠಿಣ ಕ್ರಮದ ಸಂದೇಶವಾಗಿದೆ.