ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಬೆಂಗಳೂರಿನಲ್ಲಿ ಸ್ನೇಹಿತರಿಂದಲೇ ಕ್ಯಾಬ್‌ ಚಾಲಕನ ಕೊಚ್ಚಿ ಕೊಲೆ

Bengaluru Crime: 2020ರಲ್ಲಿ ಕೊಲೆ ಕೇಸ್ ಒಂದರಲ್ಲಿ ಕೌಶಿಕ್ ಎ8 ಆರೋಪಿಯಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೂಲಕ ಹೊರಬಂದು, ಕ್ಯಾಬ್ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಭಾನುವಾರ ರಾತ್ರಿ ಕೌಶಿಕ್, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಜಗಳ ನಡೆದಿದೆ. ಬಳಿಕ ಜೊತೆಯಲ್ಲಿದ್ದ ಸ್ನೇಹಿತರೇ ಕೌಶಿಕ್‌ನನ್ನು ಹತ್ಯೆಗೈದಿದ್ದಾರೆ.

ಬೆಂಗಳೂರಿನಲ್ಲಿ ಸ್ನೇಹಿತರಿಂದಲೇ ಕ್ಯಾಬ್‌ ಚಾಲಕನ ಕೊಚ್ಚಿ ಕೊಲೆ

-

ಹರೀಶ್‌ ಕೇರ ಹರೀಶ್‌ ಕೇರ Sep 8, 2025 1:38 PM

ಬೆಂಗಳೂರು : ಬೆಂಗಳೂರಲ್ಲಿ (Bengaluru Crime news) ಮತ್ತೊಂದು ಭೀಕರವಾದ ಕೊಲೆ (Murder case) ಸಂಭವಿಸಿದೆ. ಕಾರ್ ಡ್ರೈವರ್‌ ಒಬ್ಬರನ್ನು ಅವರ ಸ್ನೇಹಿತರೇ ಸೇರಿ ಭೀಕರವಾಗಿ ಮುಗಿಸಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ನಡೆದಿದೆ. ಕೌಶಿಕ್ (25 ) ಕೊಲೆಯಾದ ದುರ್ದೈವಿ. ಮೃತ ಕೌಶಿಕ್ ಬ್ಯಾಟರಾಯನಪುರದಲ್ಲಿ ರೌಡಿಶೀಟರ್ ಆಗಿದ್ದವನೂ ಹೌದು ಎಂದು ಗೊತ್ತಾಗಿದೆ.

2020ರಲ್ಲಿ ಕೊಲೆ ಕೇಸ್ ಒಂದರಲ್ಲಿ ಕೌಶಿಕ್ ಎ8 ಆರೋಪಿಯಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೂಲಕ ಹೊರಬಂದು, ಕ್ಯಾಬ್ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಭಾನುವಾರ ರಾತ್ರಿ ಕೌಶಿಕ್, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಜಗಳ ನಡೆದಿದೆ. ಬಳಿಕ ಜೊತೆಯಲ್ಲಿದ್ದ ಸ್ನೇಹಿತರೇ ಕೌಶಿಕ್‌ನನ್ನು ಹತ್ಯೆಗೈದಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗನನ್ನೇ ಜೀವಂತ ಸುಟ್ಟುಹಾಕಿದ ಹೆತ್ತವರು!

ಬಾಗಲಕೋಟೆ : ರಾಜ್ಯದಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಹೆತ್ತ ಮಗನನ್ನೇ ತಂದೆ-ತಾಯಿ ಡೀಸೆಲ್ ಸುರಿದು ಸಜೀವವಾಗಿ ಸುಟ್ಟು ಹಾಕಿರುವ (murder case)) ಬರ್ಬರ ಘಟನೆ ಬಾಗಲಕೋಟೆ (Bagalakote) ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಜಮಖಂಡಿಯ ಬಿದರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುಶ್ಚಟಗಳ ದಾಸನಾಗಿ, ಸಾಲ ಮಾಡಿಕೊಂಡು, ಆಸ್ತಿಯಲ್ಲಿ ಪಾಲು ಕೇಳಿ, ಮನೆಯವರ ಮೇಲೆ ಹಲ್ಲೆಗೆ ಯತ್ನಿಸಿದ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಅನೀಲ ಕಾನಟ್ಟಿ (32) ಕೊಲೆಯಾದ ಯುವಕ. ಆತನ ಸಹೋದರ ಬಸವರಾಜ (35), ತಂದೆ ಪರಪ್ಪ (62), ತಾಯಿ ಶಾಂತಾ (55) ಬಂಧಿತರು. ಶುಕ್ರವಾರ ರಾತ್ರಿ ಅನೀಲ ಮನೆಯಲ್ಲಿ ಜಗಳ ಮಾಡಿ, ನಿಮ್ಮನ್ನೆಲ್ಲ ಸಾಯಿಸುತ್ತೇನೆ ಎಂದು ಮುಂದಾದಾಗ ಪೋಷಕರು ಹತ್ಯೆಗೈದಿದ್ದಾರೆ. ಕಣ್ಣಿಗೆ ಕಾರದ ಪುಡಿ ಎರಚಿ, ಹಗ್ಗದಿಂದ ಕುತ್ತಿಗೆಗೆ ಬಿಗಿದು, ಎರಡೂ ಕೈ ಕಟ್ಟಿ, ಮನೆಯಿಂದ ಹೊರಗೆಳೆದು ತಂದು, ಆತನ ಮೈಮೇಲೆ ಡೀಸೆಲ್ ಸುರಿದು, ಸುಟ್ಟು ಹಾಕಿದ್ದಾರೆ. ಈತ ದುಶ್ಚಟಗಳ ದಾಸನಾಗಿ, ಸಾಕಷ್ಟು ಸಾಲ ಮಾಡಿದ್ದಲ್ಲದೆ ಆಸ್ತಿಯಲ್ಲಿ ಪಾಲು ಕೇಳಿ ಮನೆಯವರಿಗೆ ಸದಾ ಕಿರುಕುಳ ನೀಡುತ್ತಿದ್ದ. ಮನೆಯವರ ಮೇಲೆ ಹಲ್ಲೆಗೂ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Sanjay Dutt: ಜೋಡಿ ಕೊಲೆ ಹಂತಕ ನಟ ಸಂಜಯ್‌ ದತ್‌ ಕುತ್ತಿಗೆಗೆ ಬ್ಲೇಡ್‌ ಇಟ್ಟಿದ್ನಂತೆ!