ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Feb 15, 2026 2:18 PM

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು (Chemical tank explosion) ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರ ಮೂಲದ ಕಾರ್ಮಿಕರು ಕಾರೆಕಟ್ಟೆಯಿಂದ‌ ಬೇರೆ ಕಡೆಗೆ ಕಾರ್ಖಾನೆ ಶಿಫ್ಟ್​​ ಮಾಡುತ್ತಿದ್ದ ವೇಳೆ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಾಂತರ ಕೆಲಸ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿತ್ತು ಎನ್ನಲಾಗಿದ್ದು, ಇಂದು ಕಾರ್ಮಿಕರು ರಾಸಾಯನಿಕ ಟ್ಯಾಂಕ್​​ ತೆರವು ಮಾಡುತ್ತಿದ್ದ ವೇಳೆ ಅವಘಡ ನಡೆದಿದೆ.

ಇದೇ ಕಾರ್ಖಾನೆಯಲ್ಲಿ 4 ವರ್ಷದ ಹಿಂದೆಯೂ ಅವಘಡ ಸಂಭವಿಸಿತ್ತು. ರಾಸಾಯನಿಕ ಸೋರಿಕೆಯಾಗಿ ‌ ನೂರಾರು ಎಕರೆ ಬೆಳೆ ಹಾನಿಯಾಗಿತ್ತು. ಎರಡು ನಾಯಿಗಳು‌‌ ಮೃತಪಟ್ಟಿದ್ದವು. ಆ ವೇಳೆ ಅದೃಷ್ಟವಶಾತ್ ಜನರ ಪ್ರಾಣ ಹಾನಿಯಾಗಿರಲ್ಲ. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾನಿಯಾದ ಬೆಳೆಗೆ ಮಂಡ್ಯ ಜಿಲ್ಲಾಡಳಿತ ಪರಿಹಾರ ಕೊಡಿಸಿತ್ತು. ಈವರೆಗೆ ಕಾರ್ಖಾನೆ ಆರಂಭವೇ ಆಗಿರಲಿಲ್ಲ. ಹೀಗಾಗಿ ಮಾಲಿಕ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಿಸುತ್ತಿದ್ದ. ಮುಂಜಾಗ್ರತಾ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಮತ್ತೆ ದುರಂತ ಸಂಭವಿಸಿದೆ. ಬಸರಾಳು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಲಿಂಡರ್‌ ಸ್ಫೋಟ

ರಾಮಮೂರ್ತಿ ನಗರದ ಬಳಿಕ ಬೆಂಗಳೂರಿನ ಮತ್ತೊಂದು ಸ್ಥಳದಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿರುವ (Cylinder Blast) ಘಟನೆ ನಡೆದಿದೆ. ರಾಮಮೂರ್ತಿ ನಗರದಲ್ಲಿ ಇತ್ತೀಚೆಗಷ್ಟೇ ಸಿಲಿಂಡರ್ ಸ್ಫೋಟಗೊಂಡು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಯಲಹಂಕದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ.

ಮೈಸೂರು ಸ್ಪೋಟ; ಹೂವಿನ ವ್ಯಾಪಾರಿ ಮಂಜುಳಾ ಸಾವಿನ ಸುದ್ದಿ ಕೇಳಿ ಅಣ್ಣನೂ ಸಾವು

ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡಿದೆ. ಸ್ಫೋಟ ಹೇಗಾಯಿತು ಅನ್ನೋದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಆದ್ರೆ ಬೆಳಗ್ಗೆ ಗ್ಯಾಸ್‌ ಹಚ್ಚುವಾಗ ಅಥವಾ ಲೈಟ್‌ ಆನ್‌ ಮಾಡಿದಾಗ ಗ್ಯಾಸ್‌ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ.