ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Congress Worker Ganesh Murder Case: ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಗೌಡ ಕೊಲೆ ಕೇಸ್‌: ಬಜರಂಗ ದಳ ಕಾರ್ಯಕರ್ತ ಮಿಥುನ್‌ ಬಂಧನ

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ.

ಕೊಲೆ ಆರೋಪಿ ಮಿಥುನ್

ಚಿಕ್ಕಮಗಳೂರು, ಡಿ.​ 07: ಜಿಲ್ಲೆಯ (Chikkamagaluru) ಸಖರಾಯಪಟ್ಟಣದಲ್ಲಿ (Sakharayapatna) ನಡೆದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್​ ಕೊಲೆ (Congress Worker Ganesh Murder Case) ಕೇಸ್​​ನಲ್ಲಿ ಬಜರಂಗ ದಳ ಕಾರ್ಯಕರ್ತ ಭಾಗಿಯಾಗಿರುವುದು ಪತ್ತೆಯಾಗಿದ್ದು, ಮಿಥುನ್​​ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಪ್ರಕರಣದಲ್ಲಿ ಮಿಥುನ್ ಪಾತ್ರ ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿ ಮಿಥುನ್​​ನನ್ನು​ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.

ಗಣೇಶ್ ಹತ್ಯೆಯಲ್ಲಿ‌ A6 ಆಗಿರುವ ಮಿಥುನ್‌ A1 ಸಂಜಯ್ ಸ್ನೇಹಿತನಾಗಿದ್ದು, RSS ಮತ್ತು ಬಜರಂಗದಳದಲ್ಲಿ‌ ಸಕ್ರಿಯ ಕಾರ್ಯಕರ್ತ ಎಂಬುದು ಗೊತ್ತಾಗಿದೆ. ಪ್ರಕರಣ ಸಂಬಂಧ A1 ಸಂಜಯ್ ಮತ್ತು A3 ನಾಗಭೂಷಣ್​​ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, A2 ನಿತಿನ್, A4 ದರ್ಶನ್ ಹಾಗೂ ಅಜಯ್​​​​ಗಾಗಿ ಹುಡುಕಾಟ ಮುಂದುವರಿದಿದೆ. ಗಣೇಶ್ ಹತ್ಯೆ ಬಳಿಕ ಈ ಮೂವರು ಆರೋಪಿಗಳು ‌ತಲೆಮರೆಸಿಕೊಂಡಿದ್ದಾರೆ.

ಡಿ.5ರಂದು ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ಗಣೇಶ್ (40) ಅವರನ್ನು ಕೊಲೆ ಮಾಡಲಾಗಿತ್ತು. ಮಚ್ಚಿನಿಂದ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು ಬರ್ಬರವಾಗಿ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯ ಗಣೇಶರನ್ನು ಕೊಂದಿದ್ದರು. ಸಖರಾಯಪಟ್ಟಣ ‌ಬಳಿಯ ಕಲ್ಮರಡಿ‌ ಮಠದ ‌ ರಸ್ತೆಯಲ್ಲಿ ಘಟನೆ ನಡೆದಿತ್ತು. ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ಗಣೇಶ್​​ ‌ತೆರಳುತ್ತಿದ್ದಾಗ ಬೈಕ್​​ನಲ್ಲಿ ಅಡ್ಡಗಟ್ಟಿದ್ದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿತ್ತು. ಬಳಿಕ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಚಿಕ್ಕಮಗಳೂರು ಎಸ್​​​ಪಿ ವಿಕ್ರಮ್ ನೇತೃತ್ವದಲ್ಲಿ 4 ತಂಡ ರಚಿಸಿ ಸೋಧ ನಡೆಸಲಾಗಿತ್ತು.

ದತ್ತ ಜಯಂತಿ ಬ್ಯಾನರ್‌ ಗಲಾಟೆ; ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಸಖರಾಯಪಟ್ಟಣದಲ್ಲಿ ಬಿಗಿ ಬಂದೋಬಸ್ತ್​​

ಗಣೇಶ್ ಗೌಡ ಹತ್ಯೆ ಪ್ರಕರಣದ ಬೆನ್ನಲ್ಲೇ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಚಿಕ್ಕಮಗಳೂರು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಸಖರಾಯಪಟ್ಟಣದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಹರೀಶ್‌ ಕೇರ

View all posts by this author