ಚಿತ್ರದುರ್ಗ, ಏ.02: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್ ಮುಖಂಡನ ಶವ ಪತ್ತೆಯಾಗಿದೆ. ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡ (congress leader) ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಮೂರು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ (body found) ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಿವಲಿಂಗಪ್ಪ ಅವರೊಂದಿಗೆ ವೈರ ಹೊಂದಿದ್ದವರು ಹಾಗೂ ಶವ ದೊರೆತ ಸ್ಥಳದ ಆಸುಪಾಸಿನ ಸಿಸಿಟಿವಿ ಫೂಟೇಜ್‌ಗಳ ಮಾಹಿತಿ ಕಲೆಹಾಕಲಾಗುತ್ತಿದೆ.
ತುಂಗಭದ್ರಾ ನದಿಯಲ್ಲಿ ಮುಳುಗಿ ನಾಲ್ವರು ಸಾವು
ರಾಯಚೂರು: ತುಂಗಭದ್ರಾ ನದಿಗೆ (Tungabhadra River) ಸ್ನಾನಕ್ಕೆ ತೆರಳಿದ್ದ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ (Andhra Pradesh) ಕೊಸಗಿ ಮಂಡಲದ ಕಂದಕೂರು ಬಳಿ ನಡೆದಿದೆ. ನ್ವಿ (Manvi) ತಾಲೂಕಿನ ಕುರ್ಡಿ ಗ್ರಾಮದ ದಾಸರಿ ಉಮಾವತಿ (35), ದಾಸರಿ ರತ್ನಮ್ಮ (26) ಮಹೇಶ (24) ಮತ್ತು ಶಿವಾನಂದ (28) ಮೃತ ದುರ್ದೈವಿಗಳು.
ಸೇನಾ ಚಲನವಲನ ಪತ್ತೆಹಚ್ಚಲು ಸಿಸಿಟಿವಿ ಕ್ಯಾಮರಾ ಅಳವಡಿಕೆ: ಪಾಕಿಸ್ತಾನದ ಐಎಸ್ಐ ಜತೆ ಸಂಪರ್ಕ ಹೊಂದಿದ್ದ ಜಾಲ ಪತ್ತೆ
ಸಂಬಂಧಿಕರ ಮದುವೆಗೆ ತೆರಳಿದ್ದವರು ಮಧ್ಯಾಹ್ನ ಸ್ನಾನಕ್ಕೆ ನದಿಗೆ ಇಳಿದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಆಂಧ್ರಪ್ರದೇಶ ಕರ್ನಾಟಕ ಗಡಿ ಭಾಗದ ರಾಜೊಳ್ಳಿಬಂಡಾ ಆಣೆಕಟ್ಟಿನ ಕೊನೆ ಭಾಗದ ಬಳಿ ಈ ಘಟನೆ ನಡೆದಿದೆ. ಆಂಧ್ರದ ಕರ್ನೂಲು ಜಿಲ್ಲೆಯ ಕೊಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಸ್ಥಳೀಯ ಮೀನುಗಾರರ ಸಹಾಯದಿಂದ ಶವಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಕೊಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.