ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

B Nagendra: ವಾಲ್ಮೀಕಿ ನಿಗಮ ಹಗರಣದಲ್ಲಿ ಚಾರ್ಜ್ ಶೀಟ್‌ ಸಲ್ಲಿಕೆ; ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್

ವಾಲ್ಮೀಕಿ ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಈ ಹಗರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ಮಾಜಿ ಸಚಿವ ಬಿ. ನಾಗೇಂದ್ರ ಅವರು ಎಲ್ಲೂ ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಿದೆ.

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ಬಿ. ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್

-

Prabhakara R
Prabhakara R Nov 25, 2026 11:14 PM

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಶೇಷ ತನಿಖಾ ದಳದಿಂದ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪ್ರಕರಣದಲ್ಲಿ (Valmiki Corporation scam) ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಮತ್ತು ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರ ಹೆಸರನ್ನು ಆರೋಪಿಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಅವರನ್ನು ಪ್ರಮುಖ ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ.

ನಿಗಮದ ಕೋಟ್ಯಂತರ ರೂ. ಹಣವನ್ನು ನಾಗೇಂದ್ರ ಅವರು ದುರ್ಬಳಕೆ ಮಾಡಿರುವ ಬಗ್ಗೆ ತನಿಖೆಯಲ್ಲಿ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಸಿಐಡಿ ಸ್ಪಷ್ಟಪಡಿಸಿದೆ. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್ ಮತ್ತು ಹೊರಗಿನ ಮಧ್ಯವರ್ತಿಗಳಾದ ಸತ್ಯನಾರಾಯಣ ವರ್ಮ, ನೆಕ್ಕುಂಟಿ ನಾಗರಾಜ್ ಸೇರಿಕೊಂಡು ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಮಾಡಿದ್ದಾರೆ. ಈ ಅಕ್ರಮ ವ್ಯವಹಾರಗಳು ಅಂದಿನ ಸಚಿವರ ಗಮನಕ್ಕೆ ಬಂದಿರಲಿಲ್ಲ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಹಗರಣದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ರಾಜ್ಯ ತನಿಖಾ ಸಂಸ್ಥೆಯಿಂದಲೇ ಕ್ಲೀನ್ ಚಿಟ್ ಸಿಕ್ಕಿರುವುದರಿಂದ, ಅವರು ಮತ್ತೆ ಡಿಕೆಶಿ ಸಂಪುಟ ಸೇರುವ ಸಾಧ್ಯತೆ ಇದೆ. ರಾಜ್ಯದ ಸಿಐಡಿ ತನಿಖೆಯಲ್ಲಿ ನಾಗೇಂದ್ರ ಅವರಿಗೆ ರಿಲೀಫ್ ಸಿಕ್ಕಿದ್ದರೂ, ಕೇಂದ್ರ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರತ್ಯೇಕ ಪ್ರಕರಣಗಳಲ್ಲಿ ಅವರು ಈಗಲೂ ಆರೋಪಿಯಾಗಿಯೇ ಮುಂದುವರಿದಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಬೆನ್ನಲ್ಲೇ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿ ವಿನಯ್‌ ಕುಲಕರ್ಣಿ; ಅವರ ಮುಂದಿರುವ ಆಯ್ಕೆಗಳೇನು?

ಹಗರಣದ ಸಂಪೂರ್ಣ ಸಂಚನ್ನು ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ್ ಹಾಗೂ ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮ ಮತ್ತು ನೆಕ್ಕುಂಟಿ ನಾಗರಾಜ್ ಸೇರಿ ರೂಪಿಸಿದ್ದಾರೆ ಎಂದು ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಬೊಟ್ಟು ಮಾಡಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸುವಾಗ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ನಿಯಮಗಳನ್ನು ಪಾಲಿಸಿಲ್ಲ ಎಂಬ ಅಂಶವನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.