Byrathi Basavaraj: ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜುಗೆ ಸಿಐಡಿ ಲುಕೌಟ್ ನೋಟಿಸ್
ಬೈರತಿ ಬಸವರಾಜು ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೈರತಿ ಬಸವರಾಜು ಅವರು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು, ಸಿಐಡಿ ಪೊಲೀಸ್ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧೆಡೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
ಶಾಸಕ ಬೈರತಿ ಬಸವರಾಜು -
ಬೆಂಗಳೂರು, ಫೆ.12: ರೌಡಿ ಬಿಕ್ಲು ಶಿವ ಕೊಲೆ (Rowdy Sheeter Biklu Shiva Murder Case) ಪ್ರಕರಣದಲ್ಲಿ ಹೈಕೋರ್ಟ್ (Karnataka high court) ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜು (Byrathi Basavaraj) ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದು, ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ (lookout notice) ಹೊರಡಿಸಿದ್ದಾರೆ.
ಬೈರತಿ ಬಸವರಾಜು ಬಂಧನಕ್ಕೆ ಸಿಐಡಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬೈರತಿ ಬಸವರಾಜು ಅವರು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಶಂಕೆಯಿದ್ದು, ಸಿಐಡಿ ಪೊಲೀಸ್ ಅಧಿಕಾರಿಗಳು ಮಹಾರಾಷ್ಟ್ರದ ವಿವಿಧೆಡೆ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಈ ಮಧ್ಯೆ ಬೈರತಿ ಬಸವರಾಜು ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಅವರ ವಿರುದ್ಧ ಲುಕೌಟ್ ನೋಟಿಸ್ ಹೊರಡಿಸಿದ್ದಾರೆ.
''ಬೈರತಿ ಬಸವರಾಜು ಅವರು ಮಹಾರಾಷ್ಟ್ರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ತಂಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಅವರನ್ನು ಬಂಧಿಸುವ ಉದ್ದೇಶಕ್ಕೆ ವಿಶೇಷ ತಂಡಗಳನ್ನು ಮಹಾರಾಷ್ಟ್ರಕ್ಕೆ ಕಳುಹಿಸಿದ್ದೇವೆ. ಅವರು ವಿದೇಶಕ್ಕೆ ಪರಾರಿಯಾಗದಂತೆ ತಡೆಯಲು ಲುಕ್‌ಔಟ್ ನೋಟಿಸ್ ಸಹ ಜಾರಿ ಮಾಡಿದ್ದೇವೆ. ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಬೈರತಿ ಬಸವರಾಜು ಅವರ ಬಗ್ಗೆ ಫೋಟೊ ಸಮೇತ ಮಾಹಿತಿ ರವಾನಿಸಿದ್ದೇವೆ,'' ಎಂದು ಸಿಐಡಿ ಮೂಲಗಳು ತಿಳಿಸಿವೆ.
ರೌಡಿ ಬಿಕ್ಲುಶಿವ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ''ಕೊಲೆ ಪ್ರಕರಣ ಸಂಬಂಧ ಬೈರತಿ ಬಸವರಾಜು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅವರಾಗಿಯೇ ಬಂದು ಪೊಲೀಸರಿಗೆ ಶರಣಾದರೆ ಒಳ್ಳೆಯದು. ಇಲ್ಲವಾದರೆ ಪೊಲೀಸರು ಬಂಧಿಸುತ್ತಾರೆ,'' ಎಂದು ಹೇಳಿದ್ದಾರೆ.
ಬಿಕ್ಲು ಶಿವ ಕೊಲೆ ಕೇಸ್; ಶಾಸಕ ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
ಬೈರತಿ ಬಸವರಾಜು, 2025ರ ಡಿಸೆಂಬರ್‌ನಲ್ಲೂ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗಲೂ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸಿಐಡಿ ಪೊಲೀಸರು ಬೈರತಿ ಬಸವರಾಜುರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದರು. ಆಗಲೂ ಬೈರತಿ ಬಸವರಾಜು ತಲೆಮರೆಸಿಕೊಂಡಿದ್ದರು. ಬಳಿಕ ಅವರು ಮತ್ತೊಮ್ಮೆ ಮೇಲ್ಮನವಿ ಸಲ್ಲಿಸಿದಾಗ ಹೈಕೋರ್ಟ್, 'ಶಾಸಕರ ವಿರುದ್ಧ ಬಲವಂತದ ಕ್ರಮ ಬೇಡ' ಎಂದು ಸೂಚಿಸಿ ಅಂತಿಮ ಆದೇಶ ಕಾಯ್ದಿರಿಸಿತ್ತು. ಭೈರತಿ ಬಸವರಾಜ್ ಪ್ರಸ್ತುತ ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲೂ ಜಾಮೀನು ಸಿಗದಿದ್ದರೆ, ಅವರು ಶರಣಾಗುವುದು ಅನಿವಾರ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕೊಲೆಯಾದ ಬಿಕ್ಲು ಶಿವು ಯಾರು?
ಬಿಕ್ಲು ಶಿವು ಆಲಿಯಾಸ್ ಶಿವಕುಮಾರ್ ಬೆಂಗಳೂರಿನ ಹಲಸೂರು ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ರೌಡಿ ಶೀಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ. ಶಿವಕುಮಾರ್ ವಿರುದ್ದ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11 ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 2025 ಜುಲೈ 15 ರಂದು ರಾತ್ರಿ ಮನೆಯ ಮುಂದೆ ನಿಂತಿದ್ದ ವೇಳೆ 8ರಿಂದ 12 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರನ್ನು ಕೊಚ್ಚಿ ಹತ್ಯೆ ಮಾಡಿದ್ದರು. ಅವರ ತಾಯಿ ವಿಜಯಲಕ್ಷ್ಮೀ ಅವರ ಎದುರೇ ಈ ಹತ್ಯೆ ನಡೆದಿತ್ತು. ದುಷ್ಕೃತ್ಯದ ವಿಡಿಯೋಗಳು ಕೂಡಾ ಬಹಿರಂಗಗೊಂಡಿದ್ದವು. ಶಾಸಕ ಬೈರತಿ ಬಸವರಾಜ ಕುಮ್ಮಕ್ಕಿನಿಂದಲೇ ಈ ಕೊಲೆ ನಡೆದಿದೆ ಎಂದು ಬಿಕ್ಲು ಶಿವು ತಾಯಿ ವಿಜಯಲಕ್ಷ್ಮಿ ಅವರು ಆರೋಪಿಸಿದ್ದಾರೆ.
ಶಾಸಕ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್; ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು