ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಾನು ಶಿವನ ಅವತಾರ ಎಂದು ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ ಸ್ವಯಂ ಘೋಷಿತ ದೇವಮಾನವ!

Crime News: ಸ್ವಯಂ ಘೋಷಿತ ದೇವಮಾನವನೊಬ್ಬ ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು 40 ವರ್ಷದ ಋಷಿಕೇಶ್ ವೈದ್ಯ ಎಂದು ಗುರುತಿಸಲಾಗಿದೆ. ಅತ್ಯಾಚಾರ ಮಾಡುವ ಮುನ್ನ ಪ್ರಜ್ಞೆ ತಪ್ಪಿಸಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೇವರ ಅವತಾರ ಎಂದು ಹೇಳಿ ಮಹಿಳೆಯ ಮೇಲೆ ಅತ್ಯಾಚಾರ

ಮುಂಬೈ, ಮಾ.27: ಸ್ವಯಂ ಘೋಷಿತ ದೇವಮಾನವನೊಬ್ಬ ಶಿವನ ಅವತಾರ ಎಂದು ಹೇಳಿಕೊಂಡು 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ವಿರುದ್ಧ ಕೇಸ್ ದಾಖಲಿಸಲಾಗಿದೆ (Crime News).

ಇತ್ತೀಚೆಗೆ ನಾಸಿಕ್‌ನಲ್ಲಿ ಮರ್ಚೆಂಟ್ ನೇವಿ ಮಾಜಿ ಅಧಿಕಾರಿ ಮತ್ತು ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಬಂಧನವಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಮಹಿಳೆಯು, 40 ವರ್ಷದ ಆರೋಪಿ ಋಷಿಕೇಶ್ ವೈದ್ಯ ವಿರುದ್ಧ ದೂರು ದಾಖಲಿಸಿದ್ದಾಳೆ. ಪುಣೆ ನಿವಾಸಿಯಾಗಿರುವ ಮಹಿಳೆ 2023 ರಲ್ಲಿ ಫೇಸ್‌ಬುಕ್ ಮೂಲಕ ಮೊದಲು ಆರೋಪಿಯ ಸಂಪರ್ಕಕ್ಕೆ ಬಂದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

2023ರ ಡಿಸೆಂಬರ್‌ನಲ್ಲಿ, ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಪುಣೆಗೆ ಭೇಟಿ ನೀಡಿದ್ದನು. ತಾನು ಮಹಾದೇವನ (ಶಿವನ) ಅವತಾರ ಮತ್ತು ಅವಳು ತನ್ನ ಪಾರ್ವತಿ ಎಂದು ಹೇಳಿಕೊಂಡು ಆಕೆಯನ್ನು ವಂಚಿಸಿದನೆಂದು ಆರೋಪಿಸಲಾಗಿದೆ ಎಂದು ಎಫ್‌ಐಆರ್ ಅನ್ನು ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

Murder Case: ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ

ಆ ವ್ಯಕ್ತಿ ತನ್ನನ್ನು ಪುಣೆಯ ಮಂಜರಿ ಪ್ರದೇಶದ ಲಾಡ್ಜ್‌ಗೆ ಕರೆದೊಯ್ದು, ಅಲ್ಲಿ ಅತ್ಯಾಚಾರ ಮಾಡುವ ಮುನ್ನ ಪ್ರಜ್ಞೆ ತಪ್ಪಿಸಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ವೇಳೆ, ಆರೋಪಿಯು ಮಹಿಳೆಯ ಅರಿವಿಲ್ಲದೆ ಆಕೆಯ ಛಾಯಾಚಿತ್ರಗಳನ್ನು ತೆಗೆದಿದ್ದಾನೆ ಎಂದು ಆರೋಪಿಸಲಾಗಿದೆ.

ಪಾಲ್ಘರ್ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯನ್ನು ನಡೆಸುತ್ತಿರುವ ಆರೋಪಿಯು ತನ್ನನ್ನು ಬ್ಲಾಕ್‌ಮೇಲ್ ಮಾಡಲು ಫೋಟೋಗಳನ್ನು ಬಳಸಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ, ವಸಾಯಿಯಲ್ಲಿರುವ ಹೋಟೆಲ್‌ಗೆ ಕರೆದೊಯ್ದು ಮತ್ತೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ನಾಸಿಕ್‌ನ ಪ್ರಕಾಶ್ ಖರತ್ ಪ್ರಕರಣವು ಹೊರಬಂದ ಬಳಿಕ ಮಹಿಳೆಯು ಧೈರ್ಯವಾಗಿ ಆರೋಪಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ ಎಂದು ಮಾಣಿಕ್‌ಪುರ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಹೀರಾಲಾಲ್ ಜಾಧವ್ ಹೇಳಿದ್ದಾರೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಪ್ರಾಥಮಿಕ ಅಪರಾಧ ಪುಣೆಯಲ್ಲಿ ನಡೆದಿದೆ ಎನ್ನಲಾಗಿರುವುದರಿಂದ, ಮಾಣಿಕ್‌ಪುರ ಪೊಲೀಸರು ಬುಧವಾರ (ಮಾ.25) ಶೂನ್ಯ ಎಫ್‌ಐಆರ್ ದಾಖಲಿಸಿದ್ದಾರೆ. ನಂತರ ತನಿಖೆಯನ್ನು ಹೆಚ್ಚಿನ ತನಿಖೆಗಾಗಿ ಪುಣೆಯ ಹಡಪ್ಸರ್ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ ಎಂದು ಅವರು ಹೇಳಿದರು. ಶೂನ್ಯ ಎಫ್‌ಐಆರ್ ಎನ್ನುವುದು ಅಪರಾಧ ಎಲ್ಲಿ ಸಂಭವಿಸಿದೆ ಅಥವಾ ಯಾವ ಠಾಣೆಯ ನ್ಯಾಯವ್ಯಾಪ್ತಿಯನ್ನು ಹೊಂದಿದೆ ಎಂಬುದನ್ನು ಲೆಕ್ಕಿಸದೆ ಭಾರತದ ಯಾವುದೇ ಪೊಲೀಸ್ ಠಾಣೆಯಲ್ಲಿ ಸಲ್ಲಿಸಬಹುದಾದ ಪ್ರಥಮ ಮಾಹಿತಿ ವರದಿಯಾಗಿದೆ.

ಆರೋಪಿಯು ಇದೇ ರೀತಿಯ ವಿಧಾನವನ್ನು ಬಳಸಿಕೊಂಡು ಇತರ ಹಲವಾರು ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ದೂರುದಾರರು ಆರೋಪಿಸಿದ್ದಾರೆ. ಆರೋಪಿಯನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.