ಬೆಂಗಳೂರು: ಕಾಲೇಜಿನ ಹೊರಗೆ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ (Stabbing) ಇರಿದು ಹತ್ಯೆ (crime news) ಮಾಡಿರುವ ಘಟನೆ ಬೆಂಗಳೂರಿನಲ್ಲಿ (bengaluru crime) ನಡೆದಿದೆ. ಮೃತನನ್ನು 19 ವರ್ಷದ ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿ ಯೋಗೇಶ್ ಎಂದು ಗುರುತಿಸಲಾಗಿದೆ. ನಾಗರಭಾವಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಯೋಗೇಶ್ ಬುಧವಾರ ಎರಡು ಗುಂಪುಗಳ ನಡುವೆ ನಡೆದ ಜಗಳದ ವೇಳೆ ಹತ್ಯೆಯಾಗಿದ್ದಾನೆ. ಯೋಗೇಶ್ ತರಗತಿಯಲ್ಲಿದ್ದಾಗ ಆತನ ಸ್ನೇಹಿತನೊಬ್ಬ ಹೊರಗೆ ಕರೆದಿದ್ದು ಬಳಿಕ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಯಾವುದೋ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ.
ತೀವ್ರವಾಗಿ ಗಾಯಗೊಂಡಿದ್ದ ಯೋಗೇಶ್‌ನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ ನಾಲ್ಕರಿಂದ ಐದು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಒಬ್ಬನನ್ನು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪದೇಪದೆ ಬಿಸಿ ಮಾಡಿದ ಅಡುಗೆ ಎಣ್ಣೆ ನಿರ್ಬಂಧಕ್ಕೆ ಹೊಸ ನಿಯಮ: ಅಡುಗೆ ಎಣ್ಣೆ ಬಳಕೆಗೂ ಮಾರ್ಗಸೂಚಿ ಪ್ರಕಟ
ಏನಾಯಿತು?
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರಿನ ದೀಪಾ ಕಾಂಪ್ಲೆಕ್ಸ್ ಬಳಿ ಯೋಗೇಶ್ ಓದುತ್ತಿದ್ದ ಖಾಸಗಿ ಕಾಲೇಜಿನ ಹಿಂಭಾಗದಲ್ಲಿರುವ ಜಿಮ್ ಸಮೀಪದ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ 2.30 ರಿಂದ 3 ಗಂಟೆಯ ನಡುವೆ ಎರಡು ಗುಂಪುಗಳ ನಡುವೆ ಸಂಘರ್ಷ ಉಂಟಾಗಿದೆ. ಈ ಘಟನೆಯಲ್ಲಿ ಯೋಗೇಶ್ ಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಡಿಸಿಪಿ ಎನ್. ಯತೀಶ್ ತಿಳಿಸಿದ್ದಾರೆ.
ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಯೋಗೇಶ್ ಬುಧವಾರ ಎಂದಿನಂತೆ ಕಾಲೇಜಿಗೆ ಹಾಜರಾಗಿದ್ದನು. ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಅವನಿಗೆ ಕರೆ ಮಾಡಿ ಹೊರಗೆ ಕರೆಸಿದ್ದನು. ಅಲ್ಲಿ ಸುಮಾರು 7- 8 ಮಂದಿ ಸೇರಿದ್ದರು.
ಒಬ್ಬ ವಿದ್ಯಾರ್ಥಿ ಜಗಳದ ನಡುವೆ ಯೋಗೇಶ್ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ವಿಪರೀತ ರಕ್ತಸ್ರಾವವಾಗಿದ್ದರಿಂದ ತಕ್ಷಣವೇ ಅವನ ಸ್ನೇಹಿತರು ಮೋಟಾರ್‌ಸೈಕಲ್‌ನಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಆತನನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ಆತ ಸಾವನ್ನಪ್ಪಿದ್ದಾನೆ. ಯೋಗೇಶ್ ಕಾಲೇಜಿನಲ್ಲಿ ಒಳ್ಳೆಯ ವಿದ್ಯಾರ್ಥಿ ಮಾತ್ರವಲ್ಲ ಉತ್ತಮ ಡ್ಯಾನ್ಸರ್ ಕೂಡ ಆಗಿದ್ದನು.
ಹೈಜಾಕ್ ಆತಂಕದ ನಡುವೆಯೂ ನೂರಾರು ಜನರ ಜೀವ ಉಳಿಸಿದ ಭಾರತೀಯ ಪೈಲಟ್; ಸ್ಮಿತ್ ಮಚ್ಚರ್‌ಗೆ ಕಾರ್ಯಕ್ಕೆ ಮೋದಿ ಮೆಚ್ಚುಗೆ
ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆಯನ್ನು ನಡೆಸಲು ಪ್ರಾರಂಭಿಸಿದರು. ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸುತ್ತಿದ್ದಾರೆ.