ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾರ್ಟ್‌ ಟೈಂ ಜಾಬ್‌ ಮಾಡುತ್ತಿದ್ದ ಕಾಲೇಜು ಯುವತಿ ಮೇಲೆ ಅತ್ಯಾಚಾರ ನಡೆದಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 21, 2026 12:18 PM

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾರ್ಟ್‌ ಟೈಂ ಜಾಬ್‌ ಮಾಡುತ್ತಿದ್ದ ಕಾಲೇಜು (Physical Assault) ಯುವತಿ ಮೇಲೆ ಅತ್ಯಾಚಾರ ನಡೆದಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಯುವತಿ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಹೈನಾಸ್ ಎಂಬಾತ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾಳೆ.

ಮೇ 11ರಂದು ಕಾಲೇಜು ವಿದ್ಯಾರ್ಥಿನಿ ಮೇಲೆ ಹೈನಾಸ್ ಎಂಬಾತ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗಿದೆ. ಯುವತಿ ಕಾಲೇಜು ಮುಗಿದ ಬಳಿಕ ಬಿಡುವಿನ ವೇಳೆ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದಳಂತೆ. ಈ ವೇಳೆ ಪರಿಚಯವಾಗಿದ್ದ ಹೈನಾಶ್ ಎಂಬಾತನೇ ತನ್ನ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಹೈನಾಸ್, ಅತುಲ್, ಗೋಶ್ ಮತ್ತು ಯುವತಿ ಒಂದೆಡೆ ಸೇರಿ ಪಾರ್ಟಿ ಮಾಡಿದ್ದರಂತೆ. ನಂತರ ಅತುಲ್, ಗೋಶ್ ಇಬ್ಬರು ಊಟ ತರಲು ಹೊರಗೆ ಹೋಗಿದ್ದ ವೇಳೆ ಯುವತಿ ಮೇಲೆ ಹೈನಾಸ್ ಅತ್ಯಾಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ದೂರು ನೀಡಿದರೆ ಜೀವಕ್ಕೆ ಹಾನಿ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಯುವತಿ ಹೇಳಿಕೊಂಡಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿ ಆಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಹೈನಾಸ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಮಹಜರು ನಡೆಸಲಾಗುತ್ತಿದ್ದು, ಮಾಲೀಕರಾದ ಅತುಲ್ ಮತ್ತು ಗೋಶ್ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.

ಅತ್ಯಾಚಾರ ಆರೋಪಿಗೆ ತಕ್ಕ ಶಾಸ್ತಿ; ಅಂಗಡಿ ಧ್ವಂಸ, ಆತನ ಮೇಲೆ ಹಲ್ಲೆಗೆ ಯತ್ನ

ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನಲ್ಲಿ ಮಲಗಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಮೇ 5ರಂದು ರಾತ್ರಿ ಸುಮಾರು 1.47 ಗಂಟೆ ಸುಮಾರಿನಲ್ಲಿ ಬೆಂಗಳೂರಿನ ಅಕ್ಕಿಪೇಟೆ ಕ್ರಾಸ್ ನಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಹಸುವಿನ ಮೇಲೆ “ಲೈಂಗಿಕ ದೌರ್ಜನ್ಯ” ಎಸಗಿದ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬಂಧಿತ 24 ವರ್ಷದ ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆತ ಡೆಲಿವರಿ ಪಾರ್ಟ್ನರ್ ಆಗಿ ಕೆಲಸ ಮಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ನಗರದ ಕಾಟನ್‌ಪೇಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.