ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಸಮುದಾಯಗಳ ನಡುವೆ ಕೋಮು ಘರ್ಷಣೆ; ಮನೆಗಳು, ವಾಹನಗಳಿಗೆ ಬೆಂಕಿ, ಮೂವರ ಬಂಧನ

ಗರಿಯಾಬಂದ್ ಜಿಲ್ಲೆಯ ಹತ್ಖೋಜ್ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವಿನ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ, ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರು ಭಾರೀ ಬಂದೋಬಸ್ತ್ ಮಾಡಿ, ಹಳೆಯ ಪ್ರಕರಣಗಳಿಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಗ್ರಹ ಚಿತ್ರ

ಛತ್ತೀಸ್‌ಗಢ: ಛತ್ತೀಸ್‌ಗಢದ(Chhattisgarh) ಕೋಮು ಗಲಭೆ(CommunalClash) ರಾಜ್ಯದ ಗರಿಯಾಬಂದ್(Gariaband) ಜಿಲ್ಲೆ ವ್ಯಾಪ್ತಿಯ ಹತ್ಖೋಜ್ ಗ್ರಾಮದಲ್ಲಿ ಭಾನುವಾರ ಎರಡು ಸಮುದಾಯಗಳ ನಡುವೆ ನಡೆದ ಕೋಮು ಘರ್ಷಣೆಯಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಘಟನೆ ವೇಳೆ ಹಲವು ಮನೆಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಬಿಗ್ ಬಂದೋಬಸ್ತ್ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಸುಮಾರು ನಾಲ್ಕು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ದರೋಡೆ ಮತ್ತು ಹಲ್ಲೆ ಪ್ರಕರಣದ ವಿಡಿಯೋದಲ್ಲಿದ್ದ ಗುಂಪಿನವರೇ ಹತ್ಖೋಜ್ ಗ್ರಾಮದಲ್ಲಿ ನಡೆದ ಕೋಮು ಘರ್ಷಣೆಗೆ ಕಾರಣ ಎಂದು ಹೇಳಲಾಗಿದ್ದು, ಇದೇ ಆರೋಪಿಗಳು ಜಿಲ್ಲೆಯಲ್ಲಿರುವ ಶಿವ ದೇವಾಲಯದ ಧ್ವಂಸ ಪ್ರಕರಣದಲ್ಲೂ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆಸಲಾಗಿದೆ.

ಈ ಆರೋಪಿಗಳು ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಜೈಲಿನಿಂದ ಹೊರಬಂದ ಬೆನ್ನಲೇ ದುಷ್ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಬಕ್ಲಿ ಗ್ರಾಮದಲ್ಲಿ ಸ್ಥಳೀಯರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಶಸ್ತ್ರಸಜ್ಜಿತ ದಾಳಿಯಿಂದ ಗ್ರಾಮಸ್ಥರಲ್ಲಿ ಆಕ್ರೋಶ ಉಂಟಾಗಿ, ಪರಿಸ್ಥಿತಿ ಕೋಮು ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ.

Viral Video: ಟ್ರೈನ್ ನಲ್ಲಿ ಮಿನಿ ಕಾನ್ಸರ್ಟ್: ಅಹಮದಾಬಾದ್-ಲಕ್ನೋ ಪ್ರಯಾಣಿಕರಿಂದ ಫುಲ್ ಮಸ್ತಿ!

ಒಂದು ಸಮುದಾಯದ ಸದಸ್ಯರ ಮೇಲೆ ಶಸ್ತ್ರಗಳಿಂದ ದಾಳಿ ನಡೆದಿದ್ದಾಗಿ ಹೇಳಲಾಗಿದ್ದು, ಇದರಿಂದ ಗ್ರಾಮದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರತೀಕಾರವಾಗಿ, ಗ್ರಾಮಸ್ಥರು ಆರೋಪಿಗಳ ಮನೆಗಳಿಗೆ ಬೆಂಕಿ ಹಚ್ಚಿ, 3–4 ವಾಹನಗಳನ್ನು ಸುಟ್ಟುಹಾಕಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಬಿಗಿ​​ ಬಂದೋಬಸ್ತ್​ನಲ್ಲಿ ಮಾಡಿದ್ದಾರೆ. ಅಗ್ನಿಶಾಮಕ ದಳ ಹಾಗೂ ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಿ ಬೆಂಕಿಯನ್ನು ನಂದಿಸುವ ಹಾಗೂ ಗಾಯಾಳುಗಳಿಗೆ ನೆರವು ನೀಡುವ ಕಾರ್ಯ ಕೈಗೊಳ್ಳಲಾಯಿತು. ಹಿಂಸಾಚಾರವನ್ನು ತಡೆಯಲು ಮತ್ತು ಪರಿಸ್ಥಿತಿ ಹದಗೆಡದಂತೆ ನೋಡಿಕೊಳ್ಳುವ ಸಂದರ್ಭದಲ್ಲಿ ಹಲವಾರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದಿನಿಂದಲೂ ಗಲಭೆ ಪೀಡಿತ ಪ್ರದೇಶವಾಗಿ ಹತ್ಖೋಜ್ ಗ್ರಾಮ ಗುರುತಿಸಿಕೊಂಡಿದ್ದು, ಈ ದುಷ್ಕರ್ಮಿಗಳು ದರೋಡೆ ಹಾಗೂ ವಸೂಲಿ ಕೃತ್ಯಗಳಲ್ಲಿ ತೊಡಗಿದ್ದರೆಂದು ಪೊಲೀಸ್ ಮೂಲಗಳು ಹೇಳಿವೆ. ಇವರು ಹಿಂದೆ ಹಲವಾರು ಬಾರಿ ಜೈಲು ಶಿಕ್ಷೆ ಅನುಭವಿಸಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದರು. ಹತ್ಖೋಜ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ.