ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು : ಹುಡುಗರ ಪತ್ತೆಗೆ ಮುಂದಾದ ಪೊಲೀಸರು

ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ತಿಳಿ ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್ ಜೋರು ಸೌಂಡ್ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು? ಮಾಡ್ತಾನೆ? ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್‌ಐ ಗಂಗರಾಜು ವಿದ್ಯಾರ್ಥಿಯ ಮೇಲೆ ಲಾಠಿ ಬೀಸಿದ್ದು, ವಿದ್ಯಾರ್ಥಿಗೆ ಗಾಯವಾಗಿ ರಕ್ತ ಬಂದಿದೆ ಎನ್ನಲಾಗಿದೆ.

ಪುಂಡಾಟ ಮೆರೆದ ವಿದ್ಯಾರ್ಥಿಗಳ ಮೇಲೆ ದೂರು ದಾಖಲು

ನಾಗಾರ್ಜುನ ಕಾಲೇಜು ಬಳಿ ಕಾಲೇಜಿನ ಏಳೆಂಟು ಜನ ವಿದ್ಯಾರ್ಥಿಗಳಿಂದ ಗುಂಪುಕಟ್ಟಿಕೊಂಡು ಪೊಲೀಸರ ಮೇಲೆ ಹಲ್ಲೆ ಮಾಡಿರುವ ದೃಶ್ಯ -

Profile
Ashok Nayak May 10, 2026 10:48 PM

ಚಿಕ್ಕಬಳ್ಳಾಪುರ: ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ  ನಗರ ಹೊರವಲಯದ ಬೀಡಗಾನ ಹಳ್ಳಿ ಬಳಿಯ ನಾಗಾರ್ಜುನ ಕಾಲೇಜು ಬಳಿ ಶುಕ್ರವಾರ ಸಂಜೆ ನಡೆದಿದ್ದು, ವಿದ್ಯಾರ್ಥಿ ಗಳಿಂದ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ತಾಲ್ಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆಯ ಎಎಸ್‌ಐ ಗಂಗರಾಜು ಮತ್ತು ಪೊಲೀಸ್ ಕಾನ್ಸ್ಟೇಬಲ್ ಮೇಲೆ ಪುಂಡ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ. ಕಾಲೇಜಿನಲ್ಲಿ ಶುಕ್ರವಾರ ಕಾರ್ಯಕ್ರಮವಿದ್ದ ಕಾರಣ ಸಿನಿಮಾ ನಟ ನಟಿಯರು ಆಗಮಿಸಿ ದ್ದರು. ಭದ್ರತೆಗೆ ಪೊಲೀಸರು ಕಾಲೇಜಿನ ಗೇಟ್ ಬಳಿ ತೆರಳಿದ್ದರು. ಈ ವೇಳೆ ಹತ್ತಾರು ಮಂದಿ ವಿದ್ಯಾರ್ಥಿಗಳು ಸೈಲೆನ್ಸರ್ ಅಲ್ಟರ್ ಮಾಡಿಕೊಂಡಿದ್ದ ಬೈಕ್‌ಗಳಲ್ಲಿ ಕರ್ಕಶ ಶಬ್ಧ ಮಾಡಿಕೊಂಡು ಓಡಾಡಿದ್ದರು.  

ಇದನ್ನೂ ಓದಿ: Shidlaghatt Crime: ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ 5 ವಾಹನಗಳ ಜಪ್ತಿ

ಬೈಕ್ ಕರ್ಕಶ ಶಬ್ಧ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಎಎಸ್‌ಐ ಗಂಗರಾಜು ಸೈಲೆಂಟ್ ಆಗಿ ಹೋಗಿ ಎಂದು ತಿಳಿ ಹೇಳಿದ್ದರಂತೆ. ಈ ವೇಳೆ ಪೊಲೀಸರ ಎಚ್ಚರಿಕೆಗೆ ಕ್ಯಾರೆ ಎನ್ನದೇ ಒಬ್ಬ ವಿದ್ಯಾರ್ಥಿ ಬೈಕ್ ಜೋರು ಸೌಂಡ್ ಮಾಡಿದ್ದಾನೆ. ಬೇರೆ ವಿದ್ಯಾರ್ಥಿಗಳು ಬೇಡ ಅಂದ್ರೂ ಅವನೊಬ್ಬ ಪೊಲೀಸ್ ಏನು? ಮಾಡ್ತಾನೆ? ಎಂದು ಮತ್ತೆ ಶಬ್ಧ ಮಾಡಿದ್ದಾನೆ. ಈ ವೇಳೆ ಕೆರಳಿದ ಎಎಸ್‌ಐ ಗಂಗರಾಜು ವಿದ್ಯಾರ್ಥಿಯ ಮೇಲೆ ಲಾಠಿ ಬೀಸಿದ್ದು, ವಿದ್ಯಾರ್ಥಿಗೆ ಗಾಯವಾಗಿ ರಕ್ತ ಬಂದಿದೆ ಎನ್ನಲಾಗಿದೆ.ಇದರಿಂದ ಕೆರಳಿದ ಪುಂಡ ವಿದ್ಯಾರ್ಥಿಗಳು ರಕ್ತ ಬರುವ ಹಾಗೆ ಹೊಡಿತೀಯಾ? ಅಂತ ಎಎಸ್‌ಐ ಮೇಲೆ ಮುಗಿ ಬಿದ್ದು ಹಲ್ಲೆ ಮಾಡಿದ್ದಾರೆ. ಬಿಡಿಸಲು ಪ್ರಯತ್ನಿಸಿದ ಕಾನ್ಸ್ಟೇಬಲ್‌ನನ್ನು ನೂಕಿ ಹಲ್ಲೆ ಮಾಡಿದ್ದಾರೆ. ಪೊಲೀಸರ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡುತ್ತಿರುವ ದೃಶ್ಯಗಳನ್ನು ಸಾರ್ವಜನಿಕರು ಸಿನಿಮಾ ನೋಡಿದ ಹಾಗೆ ನೋಡುತ್ತಿದ್ದರು.

ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಪುಂಡರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ಕುರಿತು ಮಾತನಾಡಿರುವ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ಪೋಲಿಸರ ಮೇಲೆ ಹಲ್ಲೆಯ ಘಟನೆ ನಡೆದಿರುವುದು ಸತ್ಯ. ವಿದ್ಯಾರ್ಥಿಗಳು ಸೈಲೆನ್ಸರ್ ಅಲ್ಟರ್ ಮಾಡಿ ಕೊಂಡಿದ್ದ ಬೈಕ್‌ಗಳಲ್ಲಿ ಕರ್ಕಷವಾಗಿ ಶಬ್ದ ಮಾಡುತ್ತಾ ಶಬ್ದ ಮಾಲಿನ್ಯ ಮಾಡುತ್ತಿದ್ದರು.

ಅವರಿಗೆ ನಮ್ಮ ಎಎಸ್‌ಐ ಬುದ್ದಿವಾದ ಹೇಳಿದಾಗ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ. ನಮ್ಮ ಪೋಲಿಸರು ಯಾರಿಗೂ ರಕ್ತ ಬರುವಂತೆ ಹೊಡೆದಿಲ್ಲ. ಈ ಕುರಿತು ನಂದಿಗಿರಿಧಾಮ ಪೋಲಿಸ್ ಠಾಣೆಯಲ್ಲಿ ಹಲ್ಲೆ ಮಾಡಿದವರ ವಿರುದ್ದ ಪ್ರಕರಣ ದಾಖ ಲಾಗಿದ್ದು ಹಲ್ಲೆಕೋರರನ್ನು ಹುಡುಕಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಖಾಕಿ ಡ್ರಸ್‌ನಲ್ಲಿ ಇರುವಾಗಲೇ ಎಎಸ್‌ಐ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡುತ್ತಿರುವು ದನ್ನು ನೋಡಿದರೆ ಸಾರ್ವಜನಿಕರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲವಾಯಿತೆ ಎಂಬ ಅನುಮಾನ ಮೂಡುತ್ತದೆ. ಅಷ್ಟಕ್ಕೂ ವಿದ್ಯಾರ್ಥಿಗಳ ಈ ರೌಡಿಯಿಸಂ ನಡವಳಿಕೆಗೆ ಪೊಲೀಸರು ಮತ್ತು ಸಾರ್ವಜನಿಕರೇ ಬೆಚ್ಚಿ ಬೀಳುವಂತೆ ಮಾಡಿದ್ದಾರೆ ಬಿದ್ದಿದ್ದಾರೆ.