Murder Case: ಬೆಂಗಳೂರಲ್ಲಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ; ಶಾಸಕ ಹ್ಯಾರಿಸ್ ಜತೆ ಗುರುತಿಸಿಕೊಂಡಿದ್ದ ಹೈದರ್
Murder Case: ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೈ ಮುಖಂಡನ ಕೊಲೆ ಮಾಡಿದ್ದಾರೆ. ವಿಚಾರ ತಿಳಿದು ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿ, ಆಕ್ರೋಶ ಹೊರಹಾಕಿದ್ದಾರೆ.


ಬೆಂಗಳೂರು: ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ (Murder Case) ಅಶೋಕನಗರದ ಗರುಡಾ ಮಾಲ್ ಬಳಿ ಶನಿವಾರ ತಡರಾತ್ರಿ ನಡೆದಿದೆ. ಶೇಖ್ ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಹೈದರ್ ಅಲಿ ಲೈವ್ ಬ್ಯಾಂಡ್‌ನಿಂದ ರಾತ್ರಿ ಸ್ನೇಹಿತನ ಜತೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಅಶೋಕ ನಗರ ಠಾಣೆ ಪೊಲೀಸರು ದೌಡಾಯಿಸಿ, ಗಾಯಾಳುವನ್ನು ಬಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಹೈದರ್ ಅಲಿ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ವಿಚಾರ ತಿಳಿದು ಹೈದರ್ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಹಿಡಿದು ಆಸ್ಪತ್ರೆ ಬಳಿ ಝಳಪಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ಶೇಖ್ ಹೈದರ್ ಅಲಿ ಶಾಸಕ ಎನ್.ಎ.ಹ್ಯಾರಿಸ್ ಜತೆ ಗುರುತಿಸಿಕೊಂಡಿದ್ದರು. ಹೈದರ್ ಅಲಿ ಹ್ಯಾರಿಸ್ ಪರ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದರು. ಘಟನೆ ಸಂಬಂಧ ಅಶೋಕನಗರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸುದ್ದಿಯನ್ನೂ ಓದಿ | Assault Case: ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಹೋದ ಲೈನ್‌ಮನ್‌ಗೆ ಹಿಗ್ಗಾಮುಗ್ಗಾ ಥಳಿತ!
ಬಸ್ ನಿಲ್ದಾಣದಲ್ಲಿ ಸಾಗರ ಮೂಲದ ವ್ಯಕ್ತಿಗೆ ಚಾಕು ಇರಿದು ಹತ್ಯೆ, ಅರ್ಧಗಂಟೆಯಲ್ಲೆ ಪಾತಕಿ ಬಂಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಶಿರಸಿ ಬಸ್ ನಿಲ್ದಾಣದಲ್ಲಿ ಪತ್ನಿಯೊಂದಿಗೆ ಶಿರಸಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವೇಳೆ ಸಾಗರ ಮೂಲದ ವ್ಯಕ್ತಿ ಓರ್ವನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಅರ್ಧಗಂಟೆಯಲ್ಲೆ ಕೊಲೆ ಪಾತಕಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಂಗಾಧರ ಕೊಲೆಯಾದ ದುರ್ದೈವಿ. ಈತ. ತನ್ನ ಪತ್ನಿ ಯೊಂದಿಗೆ ಶಿರಸಿ ಯಿಂದ ಬಸ್ ಹತ್ತಿ ಬೆಂಗಳೂರು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ.
ಇಬ್ಬರೂ ಮದುವೆಯಾಗಿ ಆರು ತಿಂಗಳು ಮಾತ್ರ ಕಳೆದಿದ್ದು ಸಾಗರ ಮೂಲದ ಗಂಗಾಧರ. ಶಿರಸಿಯ ಅಚ್ಚನಳ್ಳಿಯ ಯುವತಿಯನ್ನ ಮದುವೆ ಯಾಗಿದ್ದ ಕಾರ್ಯಕ್ರಮದ ನಿಮಿತ್ತ ಶಿರಸಿ ಅಚ್ಚನಳ್ಳಿಯಲ್ಲಿರುವ ಮಾವನ ಮನೆಗೆ ದಂಪತಿಗಳು ಆಗಮಿಸಿದ್ದರು. ಶನಿವಾರ ಕಾರ್ಯಕ್ರಮ ಮುಗಿಸಿ ಮರಳುವಾಗ ಬೆಂಗಳೂರಿಗೆ ತೆರಳುತ್ತಿರುವ ಸಂದರ್ಭದಲ್ಲಿ ಈ ಕೃತ್ಯ ಎಸಗಲಾಗಿದೆ.
ಪ್ರೀತಮ್ ಎಂಬಾತ ಕೊಲೆ ಮಾಡಿದ ಆರೋಪಿ. ಕೊಲೆ ಮಾಡಿ ಬಸ್‌ನಿಂದ ಪರಾರಿ ಯಾಗಿದ್ದ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Crime News: ರಾಮಮಂದಿರ ಅವಹೇಳನ ಮಾಡಿದ ವ್ಯಕ್ತಿಗೆ 60 ದಿನಗಳ ಜೈಲುಶಿಕ್ಷೆ
ಅರ್ಧ ಗಂಟೆಯಲ್ಲೇ ಕೊಲೆಗಾರನ ಬಂಧನ: ಕೊಲೆಯಾದ ಅರ್ಧ ಗಂಟೆಯಲ್ಲಿ ಕೊಲೆ ಆರೋಪಿಯನ್ನ ಬಂಧಿಸಲಾಗಿದೆ. ಶಿರಸಿ ಸರಕಾರಿ ಆಸ್ಪತ್ರೆ ಬಳಿ ಚಲಿಸುವ ಬಸ್ ನಲ್ಲೇ ಆರೋಪಿ ಪ್ರೀತಮ್ ಡಿಸೋಜ, ದುಂಡಶಿನಗರ ಶಿರಸಿ ಎಂಬಾತನನ್ನ ಬಂಧಿಸಿದ್ದಾರೆ ಎನ್ನಲಾಗಿದೆ.