ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Vinay Kulakarni: ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ವಿನಯ್‌ ಕುಲಕರ್ಣಿ -

ಹರೀಶ್‌ ಕೇರ
ಹರೀಶ್‌ ಕೇರ Feb 27, 2026 12:43 PM

ಧಾರವಾಡ, ಫೆ.27: ಯೋಗೇಶ್ ಗೌಡ ಕೊಲೆ (Yogesh gowda murder) ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ (Vinay Kulakarni) ಸುಪ್ರೀಂ ಕೋರ್ಟ್ (Supreme court) ಜಾಮೀನು (bail) ನೀಡಿದೆ. ಸುಪ್ರೀಂ ಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸದ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ.

ಇತ್ತೀಚಿಗೆ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾ ಆಗಿತ್ತು. ಬಳಿಕ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.

ಸುಪ್ರೀಂ ಕೋರ್ಟ್​ನ ನ್ಯಾ. ಸಂಜಯ್ ಕರೋಲ ಅವರ ಪೀಠದಿಂದ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಆರೋಪದ ಮೇಲೆ ಜಾಮೀನು ರದ್ದಾಗಿತ್ತು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ ಮಾಡಿತ್ತು.

MLA Vinay Kulkarni: ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಏನಿದು ಯೋಗೀಶ್​ ಗೌಡ ಕೊಲೆ ಪ್ರಕರಣ?

ಬಿಜೆಪಿ ಜಿ.ಪಂ ಸದಸ್ಯ ಯೋಗೇಶ್ ಗೌಡರನ್ನು ಧಾರವಾಡದ ಜಿಮ್‌ನಲ್ಲಿ ಜೂನ್ 15, 2016ರಂದು ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೇಶ್ ಗೌಡ ಸಹೋದರ ಹಾಗೂ ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಸಿಬಿಐ ತನಿಖೆಯಾಗಬೇಕು ಎಂದು ಅಂದಿನ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದ್ದರು. ಪ್ರಕರಣವನ್ನು ಸರಕಾರ ಎಸ್‌ಐಟಿಗೆ ವಹಿಸಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ದೋಷಾರೋಪ ಪಟ್ಟಿಯನ್ನು ಕೋರ್ಟ್​​ಗೆ ಸಲ್ಲಿಸಿದೆ.