ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

21 ಕ್ಕೂ ಅಧಿಕ ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 21 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ.

21 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 2, 2026 12:46 PM

ಕೊಪ್ಪಳ: ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 21 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. 2004ರ ಜ.15ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ, ದುರುಗಪ್ಪ ನಾಯಕ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಬಳಿಕ ಅಲ್ಲಿದ್ದ ಆರೋಪಿಯ ಪತ್ನಿಯ ಮೇಲೂ ಹೊಟ್ಟೆ ಭಾಗಕ್ಕೆ ಮರಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ವೇಳೆ ಆರೋಪಿ ಪರಾರಿಯಾಗಿ, ಬೇರೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ದೀರ್ಘಕಾಲದ ಶೋಧದ ಬಳಿಕ 2025ರಲ್ಲಿ ಕನಕಗಿರಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸರಕಾರದ ಪರವಾಗಿ ಅಭಿಯೋಜಕರಾದ ನಾಗಲಕ್ಷ್ಮಿ ವಾದ ಮಂಡಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.

ತಾಯಿ ಕೊಂದ ಮಗನ ಬಂಧನ

40 ವರ್ಷ ವಯಸ್ಸಾದರೂ ಹೆತ್ತ ತಾಯಿ ಮದುವೆ ಮಾಡಲಿಲ್ಲ ಅಂತ ಆಕೆಯೊಂದಿಗೆ ಜಗಳವಾಡಿ ಪುತ್ರನೇ ಕೊಲೆ ಮಾಡಲು ಪ್ರಯತ್ನ ಮಾಡಿರುವ ಆರೋಪ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ಕೇಳಿಬಂದಿದೆ. ಉಮಾಶಂಕರ್ (40) ತನ್ನ ತಾಯಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಯತ್ನ ಮಾಡಿರುವ ಆರೋಪಿ. ಗಂಗಮ್ಮ ತನ್ನ ಮಗನಿಗೆ ಮದುವೆ ಮಾಡಲು ಸಾಕಷ್ಟು ಕಡೆ ವಧುವನ್ನು ನೋಡಲು ಮುಂದಾಗಿದ್ದರು. ಆದರೆ, ಕಳೆದ ವರ್ಷ ನಡೆದ ಕುಂಭಮೇಳಕ್ಕೆ ಉಮಾಶಂಕರ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳಿ ವಾಪಸ್ ಬರುವಾಗ ಅಪಘಾತ ನಡೆದಿತ್ತು. ಇದರಿಂದಾಗಿ ಅವರ ಹೊಟ್ಟೆ ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿ, ಕಳೆದ 10 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಉಮಾಶಂಕರ್ ಒಂದು ತಿಂಗಳಿನಿಂದ ಸರಿಯಾಗಿ ಔಷಧಿ ಮತ್ತು ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ. ಹಾಗಾಗಿ, ಆತನಿಗೆ ಸ್ವಲ್ಪ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದ್ದ. ಅಲ್ಲದೇ, ನನಗೆ ಮದುವೆ ಮಾಡು ಎಂದು ತಾಯಿ ಮತ್ತು ಸಂಬಂಧಿಕರನ್ನು ಪೀಡಿಸುತ್ತಿದ್ದ. ಆದರೆ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಆತನಿಗೆ ವಧುವನ್ನು ಕೊಡಲು ಯಾರೂ ಮುಂದಾಗದ ಹಿನ್ನೆಲೆಯಲ್ಲಿ ಮನೆಯಲ್ಲಿ ಇದೇ ವಿಚಾರಕ್ಕೆ ತಾಯಿ ಮತ್ತು ಮಗನ ನಡುವೆ ಗಲಾಟೆ ನಡೆದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.