ಪುತ್ತೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನಲ್ಲಿ ಅನ್ಯಕೋಮಿನ ಯುವಕನೊಬ್ಬ, ಅಪ್ರಾಪ್ತ ದಲಿತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ (Harassment) ನೀಡಿ ಗರ್ಭವತಿಯಾಗುವಂತೆ ಮಾಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾದ ಪುತ್ತೂರಿನ ಮುರಾ ಗ್ರಾಮದ ನಿವಾಸಿ ಸಫ್ವಾನ್ ಯಾನೆ ಅಫ್ವಾನ್ (Safwan) ಎಂಬಾತನನ್ನು ಪೋಕ್ಸೋ ಕಾಯ್ದೆ (POCSO case) ಅಡಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರಿನ ಸಮೀಪದ ಮುರಾ ಗ್ರಾಮದ ನಿವಾಸಿಯಾದ ಸಫ್ವಾನ್ ಯಾನೆ ಅಫ್ವಾನ್ ವಿರುದ್ಧ, ಅಪ್ರಾಪ್ತ ದಲಿತ ಬಾಲಕಿಯನ್ನು ಪುಸಲಾಯಿಸಿ ದೈಹಿಕ ಸಂಪರ್ಕದಲ್ಲಿ ತೊಡಗಿದ್ದ ಎಂದು ಆರೋಪಿಸಲಾಗಿದೆ. ಈ ಕೃತ್ಯದಿಂದ ಬಾಲಕಿ ಗರ್ಭವತಿಯಾಗಿದ್ದಾಳೆ ಎಂದು ಹೇಳಲಾಗಿದೆ. ಈ ಘಟನೆಯು ಸ್ಥಳೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು.
ಈ ಗಂಭೀರ ಆರೋಪದ ಕುರಿತು ಮಾಹಿತಿ ತಿಳಿದ ಕೂಡಲೇ, ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಬಾಲಕಿಯ ಕುಟುಂಬದಿಂದ ದೂರು ದಾಖಲಾದ ನಂತರ ಪೊಲೀಸರು ಆರೋಪಿ ಸಫ್ವಾನ್ ಯಾನೆ ಅಫ್ವಾನ್‌ನನ್ನು ಪತ್ತೆ ಹಚ್ಚಿ ತಕ್ಷಣವೇ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಇದನ್ನೂ ಓದಿ: 2ನೇ ಪತ್ನಿಗೆ ಕಿರುಕುಳ, ಕೊಲೆ ಬೆದರಿಕೆ; ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್