ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ

RSS: ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಕಲಬುರಗಿ: ಆರ್‌ಎಸ್​ಎಸ್ (RSS)​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ (Maharashtra) ಸೋಲಾಪುರ ಮೂಲದ ದಾನಪ್ಪ ಅಲಿಯಾಸ್ ದಾನೇಶ್ ಎಂದು ಗುರುತಿಸಲಾಗಿದ್ದು, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಾನಪ್ಪ​ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ದಾನಪ್ಪ ಅಲಿಯಾಸ್ ದಾನೇಶ್ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ಮನೋಹರ್ ಎನ್ನುವವರು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸರು ಮತ್ತು ಕಲಬುರಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್‌ನನ್ನು ಲಾತೂರಿನಲ್ಲಿ ಬಂಧಿಸಿದ್ದು, ಇಂದು ರಾತ್ರಿ ದಿನೇಶನನ್ನು ಸದಾಶಿವನಗರ ಠಾಣೆಗೆ ಕರೆತರುವ ಸಾಧ್ಯತೆಗಳಿವೆ.

ಇದನ್ನೂ ಓದಿ: Priyank Kharge: ಸಚಿವ ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಕರೆ, ಆಡಿಯೋ ರೆಕಾರ್ಡ್‌ ರಿಲೀಸ್‌ ಮಾಡಿದ ಖರ್ಗೆ

ಸರ್ಕಾರಿ ಶಾಲೆ, ಕಾಲೇಜು ಆವರಣಗಳಲ್ಲಿ ಆರ್‌ಎಸ್ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ವಿವಾದ ಭುಗಿಲೆದ್ದಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿದ್ದು, ಕರೆ ಮಾಡಿದವರು ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ. ದಿನೇಶ್ ಧಮಕಿ ಹಾಕಿರುವ ಆಡಿಯೋವನ್ನು ಸ್ವತಃ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಹರೀಶ್‌ ಕೇರ

View all posts by this author