ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cyber Attack: ಪಾಕಿಸ್ತಾನದಿಂದ ಸೈಬರ್‌ ದಾಳಿ ಸಾಧ್ಯತೆ: ಪೊಲೀಸ್‌ ಆಯುಕ್ತರ ಎಚ್ಚರಿಕೆ

ಪೊಲೀಸ್ ಕಮಿಷನರ್ ಬಿ.ದಯಾನಂದ್ (B Dayanand) ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ.

ಕಮಿಷನರ್‌ ಬಿ. ದಯಾನಂದ್

ಬೆಂಗಳೂರು : ಭಾರತ-ಪಾಕಿಸ್ತಾನದ (India- pakistan war) ನಡುವೆ ಉದ್ವಿಗ್ನ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ, ಪಾಕ್ ಮೂಲದ ಡಾರ್ಕ್‌ವೆಬ್‌ ದುಷ್ಕರ್ಮಿಗಳಿಂದ ಭಾರತದ ಬಳಕೆದಾರರ ಮೇಲೆ ಸೈಬರ್ ದಾಳಿ (‌Cyber Attack) ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರು (Bengaluru Police Commissioner) ಎಚ್ಚರಿಕೆ ಸಂದೇಶ ನೀಡಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ (B Dayanand) ಅವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದು, ಅಪರಿಚಿತ ಲಿಂಕ್, ಇ-ಮೇಲ್ ಗಳ ಮೇಲೆ ನಿಗಾವಹಿಸಿ, ಎಕ್ಸ್ ಕ್ಲೂಸಿವ್ ನ್ಯೂಸ್ ಲಿಂಕ್ ಗಳು ಹಾಗೂ ಎಪಿಕೆ ಫೈಲ್ಸ್, ಅಪರಿಚಿತ ಫಾರ್ವರ್ಡ್ ಲಿಂಕ್ ಕ್ಲಿಕ್ ಮಾಡದಂತೆ ಸೂಚನೆ ನೀಡಿದ್ದಾರೆ.

ನಾಗರಿಕರು ಜಾಗೃತರಾಗಿರುವಂತೆ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಾಟ್ಸ್ಯಾಪ್ ಸೆಕ್ಯೂರಿಟಿ ಅಪ್ಡೇಟ್ ಮಾಡಿಕೊಳ್ಳಲು ಸೂಚನೆ ಸಹ ನೀಡಲಾಗಿದೆ. ಹೆಚ್ಚಾಗಿ ಸುದ್ದಿಗಳ ಲಿಂಕ್‌ಗಳು ವಾಟ್ಸ್ಯಪ್‌ನಲ್ಲಿ ಶೇರ್‌ ಆಗುತ್ತಿವೆ. ಇವುಗಳಲ್ಲಿ ಹೆಚ್ಚಿನ ಪಾಲು ಫೇಕ್‌ ಆಗಿದ್ದು, ಇವುಗಳು ವೈರಲ್‌ ಆಗುತ್ತಿರುವ ಹಿನ್ನೆಲೆಯಲ್ಲಿ ಇವುಗಳ ಮೂಲಕ ಸೈಬರ್‌ ದಾಳಿ ನಡೆಸುವುದು ಸುಲಭವಾಗಿದೆ. ಇಂದು ಸೈಬರ್‌ ಕ್ರೈಮ್‌ ಪ್ರತಿ ಗ್ರಾಹಕನ ಮನೆ ಬಾಗಿಲನ್ನೂ ತಟ್ಟುತ್ತಿದೆ. ಎಲ್ಲರೂ ಈ ನಿಟ್ಟಿನಲ್ಲಿ ಎಚ್ಚರವಾಗಿರುವುದು ಅಗತ್ಯ ಎಂದು ತಿಳಿಸಲಾಗಿದೆ.

ಬೆಂಗಳೂರು ವಿವಿ ರಿಜಿಸ್ಟ್ರಾರ್‌ ಹುದ್ದೆ ಕೊಡಿಸುವುದಾಗಿ ಪ್ರೊಫೆಸರ್‌ಗೆ 35 ಲಕ್ಷ ವಂಚನೆ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ಪ್ರೊಫೆಸರ್ ಒಬ್ಬರಿಗೆ 35 ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ (Fraud Case) ಬೆಳಕಿಗೆ ಬಂದಿದೆ. ನಿವೃತ್ತ ಪ್ರಾಧ್ಯಾಪಕ ಆರ್.ಕೆ.ಸೋಮಶೇಖರ್ (67) ಎಂಬುವವರು ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೀಗಾಗಿ ಹೊರಮಾವು ನಂದನಂ ಲೇಔಟ್ ನಿವಾಸಿ ಬಿ.ಜಿ.ರವಿಕುಮಾರ್ ಎಂಬುವವರ ವಿರುದ್ಧ ವಂಚನೆ, ನಂಬಿಕೆ ದ್ರೋಹ, ಜೀವ ಬೆದರಿಕೆ ಸೇರಿ ವಿವಿಧ ಆರೋಪದಡಿ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೂರುದಾರ ಆರ್.ಕೆ.ಸೋಮಶೇಖರ್ 1983ರಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಪರಿಸರ ವಿಜ್ಞಾನ ವಿಭಾಗದಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡಿ, 2019ರಲ್ಲಿ ನಿವೃತ್ತರಾಗಿದ್ದರು. ಈ ನಡುವೆ 2010ರಲ್ಲಿ ಸ್ನೇಹಿತರ ಮೂಲಕ ಆರೋಪಿ ಬಿ.ಜಿ.ರವಿಕುಮಾರ್ ಪರಿಚಯವಾಗಿ ಬಳಿಕ ಸ್ನೇಹಿತರಾಗಿದ್ದರು. 2015ರಲ್ಲಿ ರವಿಕುಮಾರ್ ತನಗೆ ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ, ನಿಮಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ ನಂಬಿಸಿದ್ದ.

ಬಳಿಕ ರಿಜಿಸ್ಟ್ರಾರ್‌ ಹುದ್ದೆಗೆ 50 ಲಕ್ಷ ರೂ. ಖರ್ಚಾಗಲಿದೆ ಎಂದು ರವಿಕುಮಾ‌ರ್ ಹೇಳಿದ್ದಾರೆ. ನಂತರ ಇಬ್ಬರೂ ಮಾತುಕತೆ ನಡೆಸಿ 35 ಲಕ್ಷ ರೂ.ಗೆ ತೀರ್ಮಾನಿಸಲಾಗಿತ್ತು. ಕೆಲಸ ಆಗದಿದ್ದಲ್ಲಿ ಹಣ ವಾಪಸ್ ಕೊಡುವುದಾಗಿಯೂ ರವಿಕುಮಾರ್ ಹೇಳಿದ್ದ ಎಂದು ಸೋಮಶೇಖರ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: Aishwarya Gowda: ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ 14 ದಿನ ಇಡಿ ಕಸ್ಟಡಿಗೆ

ಹರೀಶ್‌ ಕೇರ

View all posts by this author