ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಎಂಜಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಂದ ಸೈಬರ್‌ ಕ್ರೈಂ.... ಇವ್ರು ಕೊಳ್ಳೆ ಹೊಡೆದಿದ್ದು ಎಷ್ಟು ಗೊತ್ತಾ?

ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಭಾರಿ ಪ್ರಮಾಣದ ವಂಚನೆ ಪ್ರಕರಣವನ್ನು ಭೇದಿಸಿರುವ ಪುದುಚೇರಿಯ ಸೈಬರ್ ಕ್ರೈಮ್ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. 5 ಲಕ್ಷ ರೂ. ನಗದು, 171 ಚೆಕ್ ಪುಸ್ತಕಗಳು, 75 ಎಟಿಎಂ ಕಾರ್ಡ್‌ಗಳು, 20 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಬ್ಯಾಂಕ್ ಖಾತೆ ಪುಸ್ತಕಗಳು, ಕ್ರೆಡಿಟ್ ಕಾರ್ಡ್‌ಗಳು, ಕಾರು ಸೇರಿದಂತೆ ಹಲವಾರು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸೈಬರ್ ಕ್ರೈಮ್: ಏಳು ಮಂದಿ ಬಂಧನ

(ಸಂಗ್ರಹ ಚಿತ್ರ) -

ಪುದುಚೇರಿ: ಎಂಜಿನಿಯರಿಂಗ್ ಕ್ಯಾಂಪಸ್ ನಲ್ಲಿ (Engineering Campus) ನಡೆಸುತ್ತಿದ್ದ ಸೈಬರ್ ವಂಚನೆ (Cyber Crime) ಪ್ರಕರಣವನ್ನು ಭೇದಿಸಿರುವ ಪುದುಚೇರಿ ಪೊಲೀಸರು (Puducherry Police) ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ. ಸುಮಾರು 90 ಕೋಟಿ ರೂ. ಸೈಬರ್ ಹಗರಣದ ಕೇಂದ್ರವಾಗಿದ್ದ ಪುದುಚೇರಿ ಎಂಜಿನಿಯರಿಂಗ್ ಕ್ಯಾಂಪಸ್ ನಲ್ಲಿ ತನಿಖೆ ವೇಳೆ 5 ಲಕ್ಷ ರೂ. ನಗದು, 171 ಚೆಕ್ ಪುಸ್ತಕಗಳು, 75 ಎಟಿಎಂ ಕಾರ್ಡ್‌ಗಳು, 20 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಬ್ಯಾಂಕ್ ಖಾತೆ ಪುಸ್ತಕಗಳು, ಕ್ರೆಡಿಟ್ ಕಾರ್ಡ್‌ಗಳು, ಹುಂಡೈ ವೆರ್ನಾ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುದುಚೇರಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿದ್ದ ಸೈಬರ್ ವಂಚನೆಯನ್ನು ಪತ್ತೆ ಹಚ್ಚಿದ ಸೈಬರ್ ಕ್ರೈಮ್ ಪೊಲೀಸರು ಇದರಲ್ಲಿ ವಿದ್ಯಾರ್ಥಿಗಳ ದೊಡ್ಡ ಗುಂಪೊಂದು ಭಾಗಿಯಾಗಿರುವುದನ್ನು ಕಂಡುಕೊಂಡಿದ್ದಾರೆ. ಈ ಗುಂಪು ಸ್ನೇಹಿತರು ಮತ್ತು ಸಹಪಾಠಿಗಳಿಗೆ ಸೇರಿದ ಬ್ಯಾಂಕ್ ಖಾತೆಗಳಿಗೆ ಪ್ರವೇಶವನ್ನು ಮಾರಾಟ ಮಾಡಿ ಲಕ್ಷಾಂತರ ರೂ. ಕಳವಿಗೆ ವಂಚಕರಿಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಸೈಬರ್ ಅಪರಾಧಿಗಳು ದೊಡ್ಡ ಮೊತ್ತದ ಹಣವನ್ನು ವರ್ಗಾಯಿಸಲು ವಿದ್ಯಾರ್ಥಿಗಳ ಗುಂಪು ಸಹಾಯ ಮಾಡಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: ಡಾ. ಶಾಹೀನ್ ಪ್ರೇಯಸಿಯಲ್ಲ... ಹೆಂಡತಿ ಎಂದ ದೆಹಲಿ ಸ್ಫೋಟದ ಆರೋಪಿ ಮುಝಮ್ಮಿಲ್!

ವಿದ್ಯಾರ್ಥಿಗಳಾದ ದಿನೇಶ್ ಮತ್ತು ಜಯಪ್ರತಾಪ್ ಅವರ ಬ್ಯಾಂಕ್ ಖಾತೆಗಳು ಅನಿರೀಕ್ಷಿತವಾಗಿ ಸ್ಥಗಿತಗೊಂಡಾಗ ಅವರು ಪೊಲೀಸ್ ದೂರು ನೀಡಿದ್ದಾರೆ. ಇದರ ತನಿಖೆಗೆ ಕ್ರಮ ಕೈಗೊಂಡ ಪೊಲೀಸರಿಗೆ ಅವರಿಬ್ಬರು ತಮ್ಮ ಖಾತೆ ವಿವರಗಳನ್ನು ತಮ್ಮ ಸ್ನೇಹಿತ ಹರೀಶ್ ನೊಂದಿಗೆ ಹಂಚಿಕೊಂಡಿರುವುದು ತಿಳಿದುಬಂದಿದೆ. ಆತನನ್ನು ಬಂಧಿಸಿದಾಗ ಎಲ್ಲ ವಿಚಾರಗಳು ಒಂದೊಂದಾಗಿ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳು ಮತ್ತು ಕ್ಯಾಂಪಸ್‌ನ ಹೊರಗಿನ ಜನರ 20ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಹರೀಶ್ ಸಂಗ್ರಹಿಸಿದ್ದಾನೆ. ಇವುಗಳನ್ನು ಮ್ಯೂಲ್ ಖಾತೆಗಳಾಗಿ ಪರಿವರ್ತಿಸಿ ಹಣವನ್ನು ಬೇರೆ ಖಾತೆಗಳಿಗೆ ರವಾನಿಸಲಾಗಿದೆ. ಈ ಮೂಲಕ ಕನಿಷ್ಠ 7 ಕೋಟಿ ರೂ. ಗಳನ್ನು ರವಾನಿಸಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಎಂಜಿನಿಯರಿಂಗ್ ಪದವೀಧರರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಇವರನ್ನು ಥಾಮಸ್ ಅಲಿಯಾಸ್ ಹಯಗ್ರೀವ, ಹರೀಶ್, ಗಣೇಶನ್, ಗೋವಿಂದರಾಜ್, ಯಶ್ವಿನ್, ರಾಹುಲ್ ಮತ್ತು ಅಯ್ಯಪ್ಪನ್ ಎಂದು ಗುರುತಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಗಣೇಶನ್ ಬ್ಯಾಂಕ್ ಖಾತೆಗಳಿಂದ ಲಪಟಾಯಿಸಿರುವ ಹಣವನ್ನು ಕ್ರಿಪ್ಟೋಕರೆನ್ಸಿಯಾಗಿ ಪರಿವರ್ತಿಸುತ್ತಿದ್ದನು. ಆತ ಚೀನಾದಲ್ಲಿ ಸೈಬರ್ ಅಪರಾಧಿಗಳೊಂದಿಗೆ ಕೆಲಸ ಮಾಡುತ್ತಿದ್ದ. ಇದಕ್ಕಾಗಿ ಕಮಿಷನ್ ಪಡೆಯುತ್ತಿದ್ದ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಈ ಸೈಬರ್ ಕ್ರೈಮ್ ಜಾಲವು ಅಂತಾರಾಷ್ಟ್ರೀಯ ಮಟ್ಟದಲ್ಲೂ ವ್ಯಾಪಿಸಿದೆ ಎಂದು ಸೈಬರ್ ಅಪರಾಧ ವಿಭಾಗದ ಪುದುಚೇರಿಯ ಹಿರಿಯ ಪೊಲೀಸ್ ಅಧೀಕ್ಷಕಿ ನಿತ್ಯಾ ರಾಧಾಕೃಷ್ಣನ್ ತಿಳಿಸಿದ್ದಾರೆ.

ಇದನ್ನೂ ಓದಿ: ಹಿರಿಯ ಕ್ರಿಕೆಟಿಗ ಚೇತೇಶ್ವರ್‌ ಪೂಜಾರ ಬಾಮೈದ ಜೀತ್‌ ಪಬಾರಿ ಆತ್ಮಹತ್ಯೆ!

ಯಾರೊಂದಿಗಾದರೂ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವ ಮುನ್ನ ಉಂಟಾಗುವ ಅಪಾಯಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಬ್ಯಾಂಕ್ ಖಾತೆ ಮಾಹಿತಿ, ಎಟಿಎಂ ಕಾರ್ಡ್‌ಗಳು ಅಥವಾ ಆನ್‌ಲೈನ್ ಬ್ಯಾಂಕಿಂಗ್ ವಿವರಗಳನ್ನು ಯಾರಿಗೂ ನೀಡದಂತೆ ಅವರು ಎಚ್ಚರಿಕೆ ನೀಡಿದ್ದಾರೆ.