ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನ, ಪ್ರಚೋದನಕಾರಿ ಭಾಷಣದ ಹಿನ್ನೆಲೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಬಂಧನ, ಪ್ರಚೋದನಕಾರಿ ಭಾಷಣದ ಹಿನ್ನೆಲೆ

ಶರಣ್‌ ಪಂಪ್‌ವೆಲ್

ಹರೀಶ್‌ ಕೇರ ಹರೀಶ್‌ ಕೇರ May 28, 2025 7:39 AM

ಮಂಗಳೂರು: ದಕ್ಷಿಣ ಕನ್ನಡದ (‌Dakshina Kannada) ಬಂಟ್ವಾಳದಲ್ಲಿ ಮುಸ್ಲಿಂ ಸಮುದಾಯದ ಒಬ್ಬ ಯುವಕನ ಕೊಲೆ (Murder Case) ಆಗಿರುವ ಹಿನ್ನೆಲೆಯಲ್ಲಿ, ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದ ವಿಶ್ವ ಹಿಂದೂ ಪರಿಷತ್​ ಮುಖಂಡ (vishwa hindu parishat leader) ಶರಣ್ ಪಂಪ್ವೆಲ್ (sharan pumpwell) ಅವರನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ (ಮೇ.27) ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಕೊಲೆಯಾಗಿತ್ತು. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಕೂಡ ಜಾರಿ ಮಾಡಲಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್ ಕರೆ ನೀಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಬಂಧನ ತಿಳಿಯುತ್ತಿದ್ದಂತೆ ಕದ್ರಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿದ್ದಾರೆ.

ಮುಸ್ಲಿಮರನ್ನು ಒಲೈಸಲು ಸರ್ಕಾರ ಪೊಲೀಸರಿಗೆ ಒತ್ತಡ ತಂದಿದೆ. ಸುಹಾಸ್ ಶೆಟ್ಟಿ ಹತ್ಯೆಯ ದಿನ ಬಂದ್​ಗೆ ಕರೆ ನೀಡಿರುವುದಕ್ಕೆ ಕೇಸ್ ಆಗಿತ್ತು. ಪ್ರಕರಣ ದಾಖಲಾಗಿ 20 ದಿನಗಳು ಕಳೆದುಹೋಗಿವೆ. ಈಗ ಬಂಧನ ಮಾಡಿರುವುದು ಯಾಕೆ? ಇವತ್ತಿನ ಘಟನೆ ಹಿನ್ನೆಲೆಯಲ್ಲಿ ಮುಸ್ಲಿಮರನ್ನು ಓಲೈಕೆ ಮಾಡಲು ಬಂಧಿಸಲಾಗಿದೆ. ಜೈಲಿಗೆ ಹಾಕಲ್ಲ ಅಂತ ಪೊಲೀಸ್​ ಆಯುಕ್ತರು ಹೇಳಿದ್ದಾರೆ. ಶರಣ್ ಪಂಪ್‌ವೆಲ್​ ಅವರನನ್ನು ಜೈಲಿಗೆ ಹಾಕಿದರೆ ಮುಂದೆ ಆಗುವ ಘಟನೆಗೆ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಸರ್ಕಾರ ಮತ್ತು ಪೊಲೀಸರಿಗೆ ವಿಹೆಚ್​ಪಿ ಮುಖಂಡ ಮುಖಂಡ ಪ್ರದೀಪ್ ಸರಿಪಲ್​​ ಎಚ್ಚರಿಕೆ ನೀಡಿದ್ದಾರೆ.

ʼಕೆಲ ದಿನಗಳಿಂದ ಕೆಲ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕುತ್ತಿದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕುತ್ತಿದ್ದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ, ಪೋಸ್ಟ್​ಮಾರ್ಟ್ಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡುತ್ತೇನೆ ಎಂದಿದ್ದಾನೆ. ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದವರ ವಿರುದ್ಧ 45 ಎಫ್ಐಆರ್​ ಆಗಿವೆ. ಆದರೆ ಒಬ್ಬಿಬ್ಬರನ್ನು ಬಿಟ್ಟು ಯಾರನ್ನೂ ಬಂಧನ ಮಾಡಲಿಲ್ಲ. ಎಲ್ಲರನ್ನು ಬಂಧಿಸಿʼ ಎಂದು ಎಸ್​ ​ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಒತ್ತಾಯಿಸಿದ್ದಾರೆ.

ಕಳೆದ ಗುರುವಾರ (ಮೇ.01) ದಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಈಗಾಗಲೇ ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದರು.‌

ಇದನ್ನೂ ಓದಿ: Suhas Shetty murder Case: ಸುಹಾಸ್‌ ಕೊಲೆ ಪ್ರಮುಖ ಆರೋಪಿ ಮೇಲೆ ಜೈಲಿನಲ್ಲಿ ಸಹಕೈದಿಗಳಿಂದ ಹಲ್ಲೆ ಯತ್ನ