ಶಾಲೆಯಲ್ಲಿ ಜಾತಿ ತಾರತಮ್ಯ; ಮನನೊಂದು ದಲಿತ ವಿದ್ಯಾರ್ಥಿ ಆತ್ಮಹತ್ಯೆ: ತಮಿಳುನಾಡಿನಲ್ಲೊಂದು ಹೃದಯ ವಿದ್ರಾವಕ ಘಟನೆ
Dalit student death: ಹನ್ನೊಂದನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲೇ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ದುರಂತದ ನಂತರ ಪೊಲೀಸ್ ದೂರು ದಾಖಲಿಸಲಾಗಿದ್ದು, ಬಾಲಕನ ಪೋಷಕರು ಸರ್ಕಾರಿ ಅನುದಾನಿತ ಶಾಲೆಯಲ್ಲಿ ಆತನನ್ನು ತಾರತಮ್ಯದ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಕೊಯಮತ್ತೂರು ಶಾಲೆಯ ಮುಂದೆ ನಡೆದ ಪ್ರತಿಭಟನೆ -
ಚೆನ್ನೈ, ಅ. 22: ಹನ್ನೊಂದನೇ ತರಗತಿಯ ದಲಿತ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲೇ ಶವವಾಗಿ (Dalit student death) ಪತ್ತೆಯಾದ ಘಟನೆ ತಮಿಳುನಾಡಿನ (Tamil Nadu) ಕೊಯಮತ್ತೂರಿನಲ್ಲಿ ನಡೆದಿದೆ. ಶಾಲೆಯಲ್ಲಿ ಬಾಲಕ ಜಾತಿ ತಾರತಮ್ಯ ಎದುರಿಸುತ್ತಿದ್ದ ಎಂದು ಆತನ ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಈ ಸಾವನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಿದ್ದು, ಆತನ ಪೋಷಕರು ಎತ್ತಿರುವ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ದುರಂತದ ನಂತರ ಪೊಲೀಸ್ ದೂರು ದಾಖಲಿಸಲಾಗಿದ್ದು, ಬಾಲಕನ ಪೋಷಕರು ಸರ್ಕಾರಿ ಅನುದಾನಿತ ಶಾಲೆಯಲ್ಲಿ ಆತನನ್ನು ತಾರತಮ್ಯದ ರೀತಿಯಲ್ಲಿ ನಡೆಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಗುಂಪೊಂದು ಆತನ ಜತೆ ಮಾತನಾಡುವುದನ್ನು ಬಿಟ್ಟಿತ್ತು. ಸಹಪಾಠಿಗಳ ಈ ವರ್ತನೆಯಿಂದ ಆತ ಮಾನಸಿಕವಾಗಿ ನೋವು ಅನುಭವಿಸುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ.
ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಗಳಿಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ಇತರರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ಇತರರ ಪಾತ್ರದ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ. ನಾವು ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮದುವೆಗೆ ಒಪ್ಪದ ಮಾವನ ಮಗ; ಡೆತ್ನೋಟ್ ಬರೆದಿಟ್ಟು ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ
ಈ ವಿಚಾರದ ಬಗ್ಗೆ ವಿದ್ಯಾರ್ಥಿಯ ಸಾವಿಗೂ ಮುನ್ನ ಪೋಷಕರು ದೂರು ದಾಖಲಿಸಿರಲಿಲ್ಲ. ಆದರೆ ಶಾಲೆಯ ಗಮನಕ್ಕೆ ತಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಜಾತಿ ಮತ್ತು ಅವರ ಆಹಾರ ಆಯ್ಕೆಗಳಿಂದ ಈ ತಾರತಮ್ಯ ಉಂಟಾಗಿದೆ ಎನ್ನಲಾಗಿದೆ. ಆದರೆ, ಇದು ನಿಜವೋ ಅಥವಾ ಸುಳ್ಳೋ ಎಂಬುದು ಇನ್ನೂ ತಿಳಿದುಬಂದಿಲ್ಲ.
ವಿದ್ಯಾರ್ಥಿಯ ಸಾವಿನ ಬಗ್ಗೆ ಮತ್ತು ಶಾಲೆಯೊಳಗಿನ ತಾರತಮ್ಯದ ಆರೋಪಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಯಮತ್ತೂರಿನ ಶಾಲೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪಗಳ ನಡುವೆಯೇ ಈ ಘಟನೆ ನಡೆದಿದೆ. ಕಳೆದ ವರ್ಷ, ಋತುಮತಿಯಾಗಿದ್ದ ದಲಿತ ಬಾಲಕಿಯನ್ನು ತನ್ನ ತರಗತಿಯ ಹೊರಗಿನ ಮೆಟ್ಟಿಲುಗಳ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಮಾಡಿದ ಆರೋಪದ ಮೇಲೆ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿತ್ತು.
ಕೀಟನಾಶಕ ಸೇವಿಸಿ ಡೆಲಿವರಿ ಬಾಯ್ ಆತ್ಮಹತ್ಯೆ
ಹರಿದ 10 ರೂಪಾಯಿ ನೋಟಿನ ವಿಚಾರವಾಗಿ ಗ್ರಾಹಕನೊಂದಿಗೆ ನಡೆದ ಜಗಳ ಹಲ್ಲೆಗೆ ತಿರುಗಿದ ಕೆಲ ದಿನಗಳ ಬಳಿಕ ಫ್ಲಿಪ್ಕಾರ್ಟ್ ಮಿನಿಟ್ಸ್ನ 24 ವರ್ಷದ ಡೆಲಿವರಿ ಬಾಯ್ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಯುವ ಮುನ್ನ ಡೆಲಿವರಿ ಬಾಯ್, ಈ ಘಟನೆಯ ಕುರಿತು ವಿಡಿಯೊವೊಂದನ್ನು ರೆಕಾರ್ಡ್ ಮಾಡಿದ್ದಾನೆ. ತನ್ನ ದೂರಿನ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿರುವ ಆತ, ತನ್ನ ಅಹವಾಲಿಗೆ ಸ್ಪಂದಿಸದಿದ್ದರೆ ವಿಷ ಸೇವಿಸುವುದಾಗಿ ಎಚ್ಚರಿಕೆ ನೀಡಿದ್ದ.