ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಲಿವ್‌ ಇನ್‌ ರಿಲೇಷನ್‌ಶಿಪ್‌ಗೆ ಅಡ್ಡಿ; ಪ್ರಿಯಕರನೊಟ್ಟಿಗೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಪಾಪಿ ಮಗಳು

ಪ್ರಿಯಕರನೊಟ್ಟಿಗೆ ಲಿವ್‌ ಇನ್‌ ರಿಲೇಷನ್‌ನಲ್ಲಿರಲು ತಂದೆ ತಾಯಿ ವಿರೋಧಿಸಿದ್ದಕ್ಕೆ ಮಗಳೇ ಪೋಷಕರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಪ್ರಿಯಕರನೊಟ್ಟಿಗೆ ಲಿವ್‌ ಇನ್‌ ರಿಲೇಷನ್‌ನಲ್ಲಿರಲು (Live In Relationship) ತಂದೆ ತಾಯಿ ವಿರೋಧಿಸಿದ್ದಕ್ಕೆ ಮಗಳೇ ಪೋಷಕರನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ (Bengaluru) ಕೆ.ಆರ್. ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಶ್ವೇತಾಳ ಪೋಷಕರಾದ ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ತಂಗಿ ಸುಪ್ರಿಯಾ (20) ಅವರನ್ನು ಕೊಲೆ ಮಾಡಿದ್ದಾರೆ.

ಆರೋಪಿ ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಗೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಗಳಿಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದುಕೊಂಡು ಹೋಗಲು ಸೋಮಸುಂದರ್ ಅವರು ಪತ್ನಿ ಮತ್ತು ಕಿರಿಯ ಮಗಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಬಂದಿದ್ದರು.

ಈ ವೇಳೆ ಗಲಾಟೆ ನಡೆದಿದೆ. ಪ್ರೇಮಿಗಳಿಬ್ಬರು ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ ಮನಸೋಇಚ್ಛೆ ಇರಿದಿದ್ದಾರೆ. ತೀವ್ರವಾಗಿ ಇರಿತಕ್ಕೊಳಗಾದ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾ ಮನೆಯ ಒಳಗಡೆಯೇ ರಕ್ತದ ಮಡುವಿನಲ್ಲಿ ಕುಸಿದುಬಿದ್ದು ಪ್ರಾಣ ಬಿಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ತಂದೆ ಸೋಮಸುಂದರ್ ಓಡುತ್ತಾ ಮನೆಯಿಂದ ಹೊರ ಬಂದಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ನೆರೆ ಹೊರೆಯವರು ತಕ್ಷಣವೇ ‘112’ ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಹೊಯ್ಸಳ ಸಿಬ್ಬಂದಿ ತಕ್ಷಣವೇ ಸೋಮಸುಂದರ್ ಅವರನ್ನು ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವದಿಂದ ಸೋಮಸುಂದರ್ ಕೊನೆಯುಸಿರೆಳೆದಿದ್ದಾರೆ. ಸಾಯುವ ಮುನ್ನ ತಮ್ಮ ಮೇಲಾದ ಹಲ್ಲೆ ಹಾಗೂ ಹೆಂಡತಿ, ಪುತ್ರಿಯ ಸಾವಿನ ಕುರಿತು ಮಾಹಿತಿ ನೀಡಿದ್ದಾರೆ. ಸೋಮಸುಂದರ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. . ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಲಾಗಿದೆ.

ಇನ್ಸ್ಟಾಗ್ರಾಂನಲ್ಲಿ ಶುರುವಾದ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್‌ ಇನ್‌ ಗೆಳತಿಯ ಕತ್ತು ಹಿಸುಕಿ ಕೊಂದ ಪ್ರಿಯಕರ

ತನಿಖೆಯ ಸಮಯದಲ್ಲಿ ಹೆಚ್ಚಿನ ವಿವರಗಳು ಹೊರಬಂದಿದ್ದು, ಆರೋಪಿ ಶ್ವೇತಾ ಸುಮಾರು 30 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದಳು ಎನ್ನಲಾಗಿದೆ. ಹೆಚ್ಚುತ್ತಿರುವ ಸಾಲದ ಬಗ್ಗೆ ಆಕೆಯ ಪೋಷಕರು ಆಗಾಗ್ಗೆ ಪ್ರಶ್ನಿಸುತ್ತಿದ್ದರು, ಇದು ಕುಟುಂಬದಲ್ಲಿ ಉದ್ವಿಗ್ನತೆಗೆ ಕಾರಣವಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Vishakha Bhat Heggar

View all posts by this author