ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

‌DK Shivakumar: ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಡಿಕೆ ಶಿವಕುಮಾರ್

ಹರೀಶ್‌ ಕೇರ ಹರೀಶ್‌ ಕೇರ Jul 4, 2025 5:07 PM

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ (BJP) ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು (Advertsement) ಪ್ರಕಟಿಸಿದ್ದ ಆರೋಪದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಮತ್ತು ಕೆಪಿಸಿಸಿ (KPCC) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಇಂದು ತಡೆ ನೀಡಿತು.

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. ರಾಹುಲ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಮತ್ತು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ, ಈ ಆದೇಶ ನೀಡಿದೆ. ಪ್ರತಿವಾದಿಯಾಗಿರುವ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.

ಇದನ್ನೂ ಓದಿ: Kiccha Sudeep: ಡಿಕೆ ಶಿವಕುಮಾರ್ ನಟ್ಟು-ಬೋಲ್ಟ್ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಕಿಚ್ಚ ಸುದೀಪ್