ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೈಸೂರಿನಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ ಗಲ್ಲು ಶಿಕ್ಷೆ ಪ್ರಕಟ

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾರ್ತಿಕ್‌ಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ವಸ್ತುಪ್ರದರ್ಶನ ಬಳಿ ಟೆಂಟ್‌ನಲ್ಲಿ ಮಲಗಿದ್ದಾಗ 9 ವರ್ಷದ ಬಾಲಕಿಯನ್ನು ಕಾರ್ತಿಕ್ ಎಳೆದೊಯ್ದು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿದ್ದ.

ಅತ್ಯಾಚಾರ ಆರೋಪಿ ಕಾರ್ತಿಕ್‌

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವ ವೇಳೆ ಬಲೂನ್ ಮಾರಲು ಬಂದಿದ್ದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಕಾರ್ತಿಕ್‌ಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಕಾರ್ತಿಕ್‌ ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆ ಮೈಸೂರು ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶರಾದ ಅನಿಲ್ ಪಿ ವಘಾಢೆ ಅವರು ಶಿಕ್ಷೆ ಪ್ರಕಟಿಸಿ ತೀರ್ಪು ಪ್ರಕಟಿಸಿದ್ದಾರೆ.

ಏನಿದು ಘಟನೆ?

ಕಳೆದ ವರ್ಷ ದಸರಾ ಹಿನ್ನೆಲೆಯಲ್ಲಿ ಕುಟುಂಬವೊಂದು ಗುಲ್ಬರ್ಗಾದಿಂದ ಮೈಸೂರಿಗೆ ಬಲೂನ್ ಮಾರಲು ಬಂದಿತ್ತು. ಆ ಕುಟುಂಬ ದಸರಾ ವಸ್ತುಪ್ರದರ್ಶನ ಬಳಿ ಟೆಂಟ್‌ನಲ್ಲಿ ಮಲಗಿದ್ದಾಗ 9 ವರ್ಷದ ಬಾಲಕಿಯನ್ನು ಕಾರ್ತಿಕ್ ಎಳೆದೊಯ್ದು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಿದ್ದ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಿಸಿಟಿವಿ ದೃಶ್ಯ ಆಧಾರಿಸಿ ಕಾರ್ತಿಕ್​​ ನನ್ನು ಪೊಲೀಸರು ಘಟನೆ ನಡೆದು 24 ಗಂಟೆಗಳಲ್ಲಿ ಬಂಧಿಸಿದ್ದರು.

ಒಡಿಶಾವನ್ನು ಬೆಚ್ಚಿಬೀಳಿಸಿದ ಅತ್ಯಾಚಾರ ಪ್ರಕರಣ: ಹತ್ತು ದಿನಗಳಲ್ಲಿ ಐದು ಸಾಮೂಹಿಕ ಅತ್ಯಾಚಾರ ದೂರು ದಾಖಲು

ಕಾರ್ತಿಕ್‌ ಮೈಸೂರಿನ ಸಿದ್ದಲಿಂಗಪುರದ ನಿವಾಸಿ ಆಗಿದ್ದು, ಮೈಸೂರು-ಕೊಳ್ಳೇಗಾಲ ಮಾರ್ಗದ ಬಸ್‌ನಲ್ಲಿ ಕ್ಲೀನರ್​ ಕೂಡ ಆಗಿದ್ದ. 2025ರ ಅ.9ರಂದು ಇಟ್ಟಿಗೆಗೂಡಿನ ಬಳಿಯ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ನಜರ್‌ಬಾದ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರ್ತಿಕ್‌ನನ್ನು ಬಂಧಿಸಿದ್ದರು. ಮಹಜರು ವೇಳೆ ಸಿದ್ದಲಿಂಗಪುರಕ್ಕೆ ಕರೆದೊಯ್ದು ವಾಪಸ್ ಬರುವಾಗ ಆತ ಮೇಟಗಳ್ಳಿ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದರು. ತನಿಖೆಯ ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ಆತನಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದೆ.

Vishakha Bhat Heggar

View all posts by this author