PM Narendra Modi: ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ
ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.
ಕೊಡಗಿನಲ್ಲಿ ಮೂವರ ಸೆರೆ -
ಕೊಡಗು, ಡಿ.11 : ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ವಿರುದ್ಧ ಅವಹೇಳನಕಾರಿ (defamation) ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ಕೊಡಗು (Coorg) ಜಿಲ್ಲೆಯ ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ಗುರುತಿಸಲಾಗಿದೆ.
ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯನ್ನು ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಚಪ್ಪಲಿ ಹಾರ
ಹಾವೇರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ ಸ್ಥಳೀಯರು ಮನಬಂದಂತೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿರುವ ಜಿಲ್ಲೆಯ (Haveri News) ಸವಣೂರು ಪಟ್ಟಣದಲ್ಲಿ ನಡೆದಿದೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಲೆಯ ಬಳಿ ಜಮಾಯಿಸಿದ ಸ್ಥಳೀಯರು, ಶಿಕ್ಷಕನಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಇಡೀ ಗ್ರಾಮವೇ ನೋಡುವಂತೆ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆದೊಯ್ದಿದ್ದು, ಶಿಕ್ಷಕನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ರೈತರೊಂದಿಗೆ ಸುವರ್ಣ ಸೌಧ ಮುತ್ತಿಗೆಗೆ ಯತ್ನ, ಬಿಜೆಪಿ ನಾಯಕರ ಬಂಧನ
ಸವಣೂರು ಪಟ್ಟಣದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಜಗದೀಶ್ ಎಂಬಾತನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಹೀಗಾಗಿ ಆಕ್ರೋಶಗೊಂಡ ಪೋಷಕರು, ಶಾಲೆಗೆ ತೆರಳಿ ಶಿಕ್ಷಕನಿಗೆ ಧರ್ಮದೇಟು ಕೊಟ್ಟಿದ್ದಾರೆ. ಬಳಿಕ ಶಿಕ್ಷಕನ ಕೊರಳಿಗೆ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.