ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗರ್ಭಿಣಿ ಪತ್ನಿ, ಮೂವರು ಹೆಣ್ಣು ಮಕ್ಕಳ ಗಂಟಲು ಸೀಳಿ ಕೊಂದ ಪಾಪಿ ಪತಿ!

ದೆಹಲಿ ನಗರದ ಹೊರವಲಯದ ಪ್ರೇಮ್ ಚಂದ್ ಪಾರ್ಕ್ ಪ್ರದೇಶದಲ್ಲಿ ಗರ್ಭಿಣಿ ಪತ್ನಿ ಹಾಗೂ ಮೂವರು ಪುಟ್ಟ ಹೆಣ್ಣು ಮಕ್ಕಳನ್ನು ಹತ್ಯೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಗಂಡು ಮಗುವಿನ ವ್ಯಾಮೋಹವೇ ಈ ಕೃತ್ಯಕ್ಕೆ ಕಾರಣವೆಂದು ಶಂಕಿಸಲಾಗಿದೆ. ಪ್ರಮುಖ ಆರೋಪಿ ಮುಂಚುನ್ ಕೆವತ್ ತಲೆಮರೆಸಿಕೊಂಡಿದ್ದು, ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕೊಲೆ ಆರೋಪಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (Delhi)ಯ ಹೊರ ವಲಯದ ಪ್ರೇಮ್ ಚಂದ್ ಪಾರ್ಕ್ (Prem Chand Park) ಪ್ರದೇಶದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಗಂಡು ಮಗುವಿನ ವ್ಯಾಮೋಹಕ್ಕೆ ಬಿದ್ದ ವ್ಯಕ್ತಿಯೊಬ್ಬ, ತನ್ನ ಎರಡು ತಿಂಗಳ ಗರ್ಭಿಣಿ ಪತ್ನಿ ಮತ್ತು ಮೂವರು ಪುಟ್ಟ ಹೆಣ್ಣು ಮಕ್ಕಳನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬುಧವಾರ ಬೆಳಿಗ್ಗೆ ಈ ರಕ್ತಸಿಕ್ತ ದೃಶ್ಯ ಬೆಳಕಿಗೆ ಬಂದಿದ್ದು, ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ.

ಮೃತರನ್ನು 27 ವರ್ಷದ ಅನಿತಾ (Anita) ಮತ್ತು ಅವರ ಐದು ವರ್ಷದೊಳಗಿನ ಮೂವರು ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂತಕನು ಹರಿತವಾದ ಆಯುಧದಿಂದ ನಾಲ್ವರ ಗಂಟಲನ್ನು ಸೀಳಿದ್ದನು. ಗಾಯಗಳು ಎಷ್ಟೊಂದು ಆಳವಾಗಿದ್ದವೆಂದರೆ, ಅವರ ಶ್ವಾಸನಾಳಗಳೇ ಸಂಪೂರ್ಣವಾಗಿ ಕತ್ತರಿಸಿ ಹೋಗಿದ್ದವು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಘಟನಾ ಸ್ಥಳದ ಭೀಕರತೆಯನ್ನು ವಿವರಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಮುಂಚುನ್ ಕೆವತ್ (Munchun Kewat) ಎಂಬಾತನೇ ಈ ಕೃತ್ಯದ ಹಿಂದಿರುವ ಪ್ರಮುಖ ಶಂಕಿತ. ದಂಪತಿಗೆ ಈಗಾಗಲೇ ಮೂವರು ಹೆಣ್ಣು ಮಕ್ಕಳಿದ್ದು, ಈಗ ಪತ್ನಿ ನಾಲ್ಕನೇ ಬಾರಿ ಗರ್ಭಿಣಿಯಾಗಿದ್ದರು. ಆರೋಪಿಗೆ ತನಗೆ ಗಂಡು ಮಗುವಿಲ್ಲದ ಅತೃಪ್ತಿ ಮತ್ತು ಗಂಡು ಮಗುವೇ ಬೇಕೆಂಬ ಹಠವೇ ಈ ಬರ್ಬರ ಹತ್ಯೆಗೆ ಪ್ರಚೋದನೆ ನೀಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹತ್ಯೆ ಮಾಡುವ ಮೊದಲು ಆರೋಪಿಯು ಪತ್ನಿ ಮತ್ತು ಮಕ್ಕಳಿಗೆ ಅಮಲು ಪದಾರ್ಥ ನೀಡಿರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.

ಕೆಂಪು ಕೋಟೆ ಸ್ಫೋಟ ಪ್ರಕರಣ: ಇಬ್ಬರು ಉಗ್ರರ ಬಂಧನ, ಎನ್.ಐ.ಎ ತನಿಖೆ ಚುರುಕು

ಮೂಲತಃ ಬಿಹಾರದ ಪಾಟ್ನಾ ಜಿಲ್ಲೆಯವರಾದ ಈ ಕುಟುಂಬ, ಕಳೆದ ಎರಡು ವರ್ಷಗಳಿಂದ ದೆಹಲಿಯಲ್ಲಿ ವಾಸವಾಗಿತ್ತು. ಆರೋಪಿ ಕೆವತ್ ಆಜಾದ್‌ಪುರ ಮಂಡಿಯಲ್ಲಿ ತರಕಾರಿ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದನು. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ಹತ್ತಾರು ತಂಡಗಳನ್ನು ರಚಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1) ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ವಿಧಿವಿಜ್ಞಾನ ತಂಡವು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.