ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

PM Narendra Modi: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್:‌ ಮಳವಳ್ಳಿಯ ‌ಜಾವೀದ್ ಸೆರೆ

ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ (Imran Khan) ಪ್ರಧಾನಿ ನರೇಂದ್ರ ಮೋದಿ (ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್:‌ ಮಳವಳ್ಳಿಯ ಜಾವೀದ್ ಸೆರೆ

ಆರೋಪಿ ಜಾವೀದ್

ಹರೀಶ್‌ ಕೇರ ಹರೀಶ್‌ ಕೇರ May 10, 2025 7:46 AM

ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ (Social media) ಅವಹೇಳನಕಾರಿ ಪೋಸ್ಟ್ (Derogatory post) ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ (Mandya news) ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ (Imran Khan) ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪಹಲ್ಗಾಮ್‌ ದಾಳಿ ಕೇಂದ್ರದ ಸಂಚು ಎಂದು ಸುಳ್ಳು ಸುದ್ದಿ ಹಬ್ಬಿಸಿದವರ ಬಂಧನ

ಕೋಲಾರ: ಪಹಲ್ಗಾಮ್ ಉಗ್ರರ ದಾಳಿಯನ್ನು (Pahalgam Terror Attack) ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ ಕೃತ್ಯ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕೋಲಾರದ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೋಲಾರದ ಕುಂಬಾರ ಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬಾತ ವಿಡಿಯೋ ಮಾಡಿ ಯೂಟ್ಯೂಬ್‌ನಲ್ಲಿ ಹರಿಬಿಟ್ಟಿದ್ದ. ಈ ಸಂಬಂಧ ಕೋಲಾರದ ಗಲ್ ಪೇಟೆ ಠಾಣೆ ಪೊಲೀಸರು ಮುನೀರ್ ಖಾನ್ ಖುರೇಷಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಹಿಂದೂ ಮತಗಳ ಕ್ರೋಡೀಕರಿಸಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎಂದು ಈತ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಸುಳ್ಳು ಸುದ್ದಿ ಹಬ್ಬಿಸಿದ್ದ. ಮುನೀರ್ ಖಾನ್, ಚಿಕನ್ ಅಂಗಡಿಯ ಮಾಲೀಕನಾಗಿದ್ದು, ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಪಹಲ್ಗಾಮ್ ದಾಳಿಯನ್ನು ಕೇಂದ್ರ ಸರ್ಕಾರದ ಪೂರ್ವ ಯೋಜಿತ ಕೃತ್ಯ. ಬಿಹಾರ ಚುನಾವಣೆಯಲ್ಲಿ ಹಿಂದೂಗಳ ಮತ ಗಳಿಸಲು ಈ ದಾಳಿ ನಡೆಸಲಾಗಿದೆ ಎಂದು ಹೇಳಿದ್ದ.

ಈ ವಿಡಿಯೋ ಸಾರ್ವಜನಿಕರಲ್ಲಿ ಗೊಂದಲ, ಅಶಾಂತಿ ಹಾಗೂ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಇದ್ದ ಕಾರಣ, ಪೊಲೀಸರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕೋಮು ಗಲಭೆ ತಡೆಗಟ್ಟಲು ಯೂಟ್ಯೂಬ್‌ನಿಂದ ಆ ವಿಡಿಯೋವನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Operation Sindoor: ಪಾಕಿಸ್ತಾನದ ಎರಡು ಯುದ್ಧವಿಮಾನ ಹೊಡೆದುರುಳಿಸಿದ ಭಾರತ