ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Murder Case: ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಧಾರವಾಡದ ಹಾಶ್ಮಿನಗರದಲ್ಲಿದ್ದ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಗೆ ನಿನ್ನೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಧಾರವಾಡದಲ್ಲಿ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯ ಬರ್ಬರ ಕೊಲೆ

ಕೊಲೆಯಾದ ಫೈರೋಜ್‌ ಪಠಾಣ್ -

ಹರೀಶ್‌ ಕೇರ
ಹರೀಶ್‌ ಕೇರ Apr 11, 2026 7:38 AM

ಧಾರವಾಡ, ಏ.11: ಧಾರವಾಡದಲ್ಲಿ (Dharawada) ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವ ಕಾಂಗ್ರೆಸ್‌ (youth congress) ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ (murder case) ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ.

​ಧಾರವಾಡದ ಹಾಶ್ಮಿನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೃತ್ಯ ಎಸಗಿದ ಕೂಡಲೇ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

​ಹತ್ಯೆಗೀಡಾದ ಫೈರೋಜ್‌ ಪಠಾಣ್‌ ಅವರು ಧಾರವಾಡದ ಮುಂಚೂಣಿಯ ಯುವ ನಾಯಕರಾಗಿದ್ದರು. ಆರಂಭದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಪ್ರಸ್ತುತ ಯುವ ಕಾಂಗ್ರೆಸ್‌ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ​ಫೈರೋಜ್‌ ಅವರ ಆಪ್ತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶಾಲೆಯಲ್ಲಿ 5 ವರ್ಷದ ಬಾಲಕನ ಭೀಕರ ಹತ್ಯೆ; ಮಗುವಿನ ಮೇಲೆ ನಡೆದಿದ್ಯಾ ಲೈಂಗಿಕ ದೌರ್ಜನ್ಯ? ಪ್ರಾಂಶುಪಾಲ ಅರೆಸ್ಟ್

​ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಉಪನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಹಂತಕರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಬಲೆ ಬೀಸಲಾಗಿದೆ. ಹತ್ಯೆಯ ಹಿಂದೆ ಹಳೆ ವೈಷಮ್ಯವಿದೆಯೇ ಅಥವಾ ರಾಜಕೀಯ ಕಾರಣಗಳಿವೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.