ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವೈದ್ಯನನ್ನು ಕೊಲೆ ಮಾಡಿದ ಪತ್ನಿ; 10 ವರ್ಷದ ಮಗನ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ನೋಡುತ್ತ ಕುಳಿತ ಪಾಪಿ

Dharwad News: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.

ಡಾ. ಕಿರಣ್‌ ಮತ್ತು ಡಾ. ಪ್ರಿಯಾ (ಸಂಗ್ರಹ ಚಿತ್ರ)

ಧಾರವಾಡ, ಜು. 15: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ (Dharwad News). ಕರ್ನಾಟಕ ವಿವಿ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್‌ಮೆಂಟ್‌ನಲ್ಲಿ ನೆಲೆಸಿದ್ದ ವೈದ್ಯ ಕಿರಣ್ ಅವರನ್ನು ಪತ್ನಿ ಡಾ. ಪ್ರಿಯಾ ಹತ್ಯೆ ಮಾಡಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆದಿದ್ದು, ಸದ್ಯ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ʼʼಹಲ್ಲೆ ವೇಳೆ 10 ವರ್ಷದ ಮಗನಿಗೂ ಚೂರಿ ಇರಿಯಲಾಗಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆʼʼ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿದ್ದಾರೆ. ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತಿ ಮತ್ತು ಪುತ್ರನ ಮೇಲೆ ಹಲ್ಲೆ ನಡೆಸಿದ ಬಳಿಕ ಪ್ರಿಯಾ ಆತ್ಮಹತ್ಯೆಗೆ ಶ್ರಮಿಸಿದ್ದಾಳೆ. ಮಂಗಳವಾರ (ಜುಲೈ 14) ರಾತ್ರಿಯೇ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಮತ್ತು ಪ್ರಿಯಾ ನಡುವೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಸಾಧ್ಯತೆ ಇದೆ.

ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಪ್ರಿಯಾ ಮತ್ತೊಂದು ಕೋಣೆಯಲ್ಲಿದ್ದ 10 ವರ್ಷದ ಮಗನ ಮೇಲೆ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎನ್ನುವ ಬೆಚ್ಚಿ ಬೀಳಿಸುವ ಅಂಶವೂ ಬೆಳಕಿಗೆ ಬಂದಿದೆ.

ಘಟನೆ ಗೊತ್ತಾದ ತಕ್ಷಣ ಧಾವಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಗು ಉಸಿರಾಡುತ್ತಿರುವುದನ್ನು ಗಮನಿಸಿ ತಕ್ಷಣ ತಮ್ಮ ತೋಳಿನಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಡಾ. ಕಿರಣ್ ಅವರ ಸಹೋದರಿಯರು ಧಾವಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗೆ ನಿಖರವಾದ ಕಾರಣವೇನು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

image

ಸಂಬಂಧಿಕರು ಫೋನ್ ಮಾಡಿದಾಗ ಪತಿ ರೆಸ್ಟ್ ಮಾಡುತ್ತಿದ್ದಾರೆ ಎಂದು ಪ್ರಿಯಾ ಹೇಳಿದ್ದಾಳೆ. ಡಾ. ಕಿರಣ್ ಚಿರಾಯು ಆಸ್ಪತ್ತೆಯಲ್ಲಿ ಅನಸ್ತೇಶಿಯಾ ತಜ್ಞರಾಗಿದ್ದರೆ, ಪತ್ನಿ ನೇತ್ರ ವೈದ್ಯೆ. ಸಂಜೆಯವರೆಗೂ ಫೋನ್ ಸ್ವೀಕರಿಸದೆ ಇದ್ದಾಗ ಅನುಮಾನದಿಂದ ಸಂಬಂಧಿಕರು ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂತು. ಘಟನೆಗೆ ಸರಿಯಾದ ಕಾರಣ ಕೂಡ ಇನ್ನೂ ಗೊತ್ತಾಗಿಲ್ಲ.

-ಎನ್. ಶಶಿಕುಮಾರ್, ಪೊಲೀಸ್ ಆಯುಕ್ತ

Ramesh Ballamoole

View all posts by this author