ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಗುಂಡು ಹಾರಿಸಿ ಪತ್ನಿಯನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾದ ರಿಯಲ್‌ ಎಸ್ಟೇಟ್‌ ಉದ್ಯಮಿ

ಗಾಜಿಯಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ವ್ಯಾಪಾರಿಯೊಬ್ಬರು ಬುಧವಾರ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಲದೀಪ್ ತ್ಯಾಗಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ, ‘ನನಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದೆವು ಎಂದು ಅವರು ಉಲ್ಲೇಖಿಸಿದ್ದಾರೆ.

ಪತ್ನಿಯನ್ನು ಹತ್ಯೆ ಮಾಡಿ  ತಾನೂ ಆತ್ಮಹತ್ಯೆಗೆ ಶರಣಾದ ಉದ್ಯಮಿ

Profile Vishakha Bhat Apr 17, 2025 2:47 PM

ನವದೆಹಲಿ: ಗಾಜಿಯಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ವ್ಯಾಪಾರಿಯೊಬ್ಬರು ಬುಧವಾರ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಕುಲದೀಪ್ ತ್ಯಾಗಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ, ‘ನನಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ಈ ನಿರ್ಧಾರಕ್ಕೆ ಬಂದೆವು. ಪತ್ನಿ ಅಂಶು ತ್ಯಾಗಿ ಮತ್ತು ನಾನು ಒಟ್ಟಿಗೆ ಇರುವುದಾಗಿ ನಿರ್ಧರಿಸಿದೆವು. ಹೀಗಾಗಿ, ಅವಳನ್ನೂ ಕೊಂದಿದ್ದೇನೆ’ ಎಂದು ಉಲ್ಲೇಖ ಮಾಡಿದ್ದಾರೆ. ಈ ದಂಪತಿಗೆ ಇಬ್ಬರಿಗೆ ಗಂಡು ಮಕ್ಕಳಿದ್ದಾರೆ. ಕುಲದೀಪ್ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಆಗಿದ್ದರು ಎಂದು ತಿಳಿದು ಬಂದಿದೆ.

ರಾಧಾ ಕುಂಜ್ ಸೊಸೈಟಿಯಲ್ಲಿರುವ ಮನೆಯಲ್ಲಿ ಕುಲದೀಪ್ ತನ್ನ ಪತ್ನಿಯನ್ನು ಪರವಾನಗಿ ಪಡೆದ ರಿವಾಲ್ವರ್‌ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದರು. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆಯ ಸಮಯದಲ್ಲಿ ಅವರ ಪುತ್ರರು ಮನೆಯಲ್ಲಿದ್ದರು. ಗುಂಡೇಟಿನ ಶಬ್ದ ಕೇಳಿ ಕೋಣೆಗೆ ಧಾವಿಸಿದರು. ಕುಲದೀಪ್ ಮೃತದೇಹ ನೆಲದ ಮೇಲೆ ಮತ್ತು ಅಂಶು ಅವರ ಮೃತದೇಹ ಹಾಸಿಗೆಯ ಮೇಲೆ ಬಿದ್ದಿತ್ತು. ತಕ್ಷಣ ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಇಬ್ಬರು ಮೃತಪಟ್ಟಿದ್ದರು.

ಅವರ ಕೋಣೆಯಲ್ಲಿ ಒಂದು ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ನಾನು ಕ್ಯಾನ್ಸರ್‌ನಿಂದ ಬಳಲುತ್ತಿದ್ದೇನೆ. ಆದರೆ, ಈ ವಿಚಾರ ನನ್ನ ಕುಟುಂಬದವರಿಗೆ ತಿಳಿದಿಲ್ಲ. ಬದುಕುಳಿಯುವುದು ಕಷ್ಟ ಎಂದು ತಿಳಿದಿತ್ತು. ನನ್ನ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು ಎಂದು ನಾನು ಬಯಸುತ್ತೇನೆ. ಬದುಕಿದರೂ, ಸತ್ತರೂ ನಿನ್ನ ಜೊತೆಯೇ ಎಂದು ಪತ್ನಿ ಹೇಳಿದ್ದಳು. ಹಾಗಾಗಿ, ಇಬ್ಬರೂ ಒಟ್ಟಿಗೆ ಸಾಯಲು ನಿರ್ಧರಿಸಿದ್ದೇವೆ. ನಾನು ನನ್ನ ಹೆಂಡತಿಯನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದೇನೆ. ಇದರಲ್ಲಿ ಯಾರೂ ಕೂಡ ತಪ್ಪಿತಸ್ಥರಲ್ಲ ಎಂದು ಡೆತ್‌ನೋಟ್‌ನಲ್ಲಿ ಕುಲದೀಪ್‌ ಬರೆದಿದ್ದಾರೆ. ಪೊಲೀಸರು ಪಿಸ್ತೂಲನ್ನು ವಶಪಡಿಸಿಕೊಂಡು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Self Harming: ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಹಿರಿಯ ಪೊಲೀಸ್ ಅಧಿಕಾರಿ ಪೂನಂ ಮಿಶ್ರಾ ಮಾತನಾಡಿ, "ಕುಲದೀಪ್ ತ್ಯಾಗಿ ತನ್ನ ಪತ್ನಿಗೆ ಗುಂಡು ಹಾರಿಸಿಕೊಂಡು ನಂತರ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.