ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Double Murder Case: ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿ ಕಲಹ ಉಲ್ಬಣಿಸಿ ತಾಯಿ- ಮಗನ ಕೊಲೆ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ತಾಲೂಕಿನಲ್ಲಿ ಆರೋಪಿಯೊಬ್ಬ ಅವಳಿ ಕೊಲೆ (Double Murder Case) ಮಾಡಿ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಯನ್ನು ಶೋಧಿಸುತ್ತಿದ್ದಾರೆ.

ಆಸ್ತಿಗಾಗಿ ಅವಳಿ ಕೊಲೆ, ತಾಯಿ- ಮಗನ ಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ May 12, 2025 4:55 PM

ಬಾಗಲಕೋಟೆ: ಜಿಲ್ಲೆಯಲ್ಲಿ ಆಸ್ತಿಗಾಗಿ (property dispute) ಇಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ (Double Murder Case) ಮಾಡಲಾಗಿದೆ. ಬಾಗಲಕೋಟೆ (Bagalakote news) ಜಿಲ್ಲೆಯ ಇಳಕಲ್ ತಾಲ್ಲೂಕಿನ ನಂದವಾಡಗಿ ಗ್ರಾಮದಲ್ಲಿ ಆಸ್ತಿ ವಿವಾದಕ್ಕೆ ವ್ಯಕ್ತಿಯೊಬ್ಬ ತಾಯಿ, ಮಗನನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ತಾಯಿ ಸಂಗಮ್ಮ ಗೋನಾಳ (45), ಮಗ ಸೋಮಪ್ಪ (26) ಎಂಬವರನ್ನು ಕೊಡಲಿಯಿಂದ ಕೊಚ್ಚಿ ಸಣ್ಣ ಸೋಮಪ್ಪ ಗೋನಾಳ ಎಂಬಾತ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಇಳಕಲ್ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಯುವಕನ ಬಂಧನ

ರಾಯಚೂರು : ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ.

ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ಘಟನೆಯ ಬಗ್ಗೆ ಬಾಲಕಿ ಹೇಳಿದ್ದಾಳೆ. ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: Suhas Shetty Murder Case: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ರಾಜ್ಯ ಬಿಜೆಪಿಯಿಂದ NIAಗೆ ವಹಿಸಲು ರಾಜ್ಯಪಾಲರಿಗೆ ಮನವಿ