ಪೂಂಚ್: ಪಾಕಿಸ್ತಾನದ (Pakistan) ಗಡಿ ನಿಯಂತ್ರಣ ರೇಖೆಯ (Line of Control) ಬಳಿ ಬುಧವಾರ ಮಾದಕ ದ್ರವ್ಯ (narcotics), ಚೀನೀ ಪಿಸ್ತೂಲ್ (weapons) ಅನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (Inter-Services Intelligence) ಜೊತೆ ಸಂಪರ್ಕ ಹೊಂದಿರುವ ಕಳ್ಳಸಾಗಣೆದಾರರು ಇದನ್ನು ಪಾಕಿಸ್ತಾನದಿಂದ ಭಾರತದ ಗಡಿಯಾಚೆಗೆ ಎಸೆದಿದ್ದಾರೆ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬುಧವಾರ ಇದನ್ನು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪಡೆಗಳು ಬುಧವಾರ ಎರಡು ಪ್ರತ್ಯೇಕ ಗಡಿಯಾಚೆಗಿನ ಕಳ್ಳಸಾಗಣೆ ಪ್ರಯತ್ನಗಳನ್ನು ತಡೆದಿದ್ದಾರೆ. ಒಂದು ಕಾರ್ಯಾಚರಣೆ ವೇಳೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಬಳಿ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದೆ.
ವಿಜಯ್ ಸಂಪುಟ ರಚನೆ; 21 ಟಿವಿಕೆ, 2 ಕಾಂಗ್ರೆಸ್ ಶಾಸಕರು ಪ್ರಮಾಣ ವಚನ ಸ್ವೀಕಾರ
ಇದಕ್ಕೂ ಮೊದಲು ನಡೆದ ಘಟನೆಯಲ್ಲಿ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ನಿಯೋಜಿಸಲಾದ ಸೇನಾ ಸಿಬ್ಬಂದಿ ನಿಯಂತ್ರಣ ರೇಖೆಯ ಉದ್ದಕ್ಕೂ ಶೋಧ ಕಾರ್ಯಾಚರಣೆಯ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಚೀನಾ ತಯಾರಿಸಿದ ಪಿಸ್ತೂಲ್ ಹೊಂದಿದ್ದ ಎರಡು ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜೊತೆ ಸಂಪರ್ಕ ಹೊಂದಿರುವ ಕಳ್ಳಸಾಗಣೆದಾರರು ಮಾದಕ ದ್ರವ್ಯ ಮತ್ತು ಚೀನೀ ಪಿಸ್ತೂಲ್ ಅನ್ನು ಪಾಕಿಸ್ತಾನದಿಂದ ಭಾರತದ ಗಡಿಯಾಚೆಗೆ ಎಸೆದಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ಸೌಲಭ್ಯ ಒದಗಿಸಲು ಮತ್ತು ಈ ಪ್ರದೇಶವನ್ನು ಅಸ್ಥಿರಗೊಳಿಸಲು ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸುವ ದೊಡ್ಡ ಪ್ರಯತ್ನದ ಭಾಗವಾಗಿದ್ದ ಈ ಸರಕನ್ನು ವಶಪಡಿಸಿಕೊಳ್ಳುವ ಮೂಲಕ ಭದ್ರತಾ ಪಡೆಗಳು ಭಯೋತ್ಪಾದಕರ ಯೋಜನೆಯನ್ನು ವಿಫಲಗೊಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಹಿರಿಯ ಅಧಿಕಾರಿಯೊಬ್ಬರು, ಇದು ದೊಡ್ಡ ಮಾದಕ ದ್ರವ್ಯ ಮತ್ತು ಭಯೋತ್ಪಾದನಾ ಚಟುವಟುಕೆಯ ಭಾಗವಾಗಿದೆ. ಇದು ಭೂಗತ ಕಾರ್ಮಿಕರಿಗೆ ಶಸ್ತ್ರಾಸ್ತ್ರ ಮತ್ತು ಹಣಕಾಸು ಒದಗಿಸುವ ಸ್ಪಷ್ಟ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಗಡಿಯ ಬಳಿ ನಡೆದ ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಶ್ನಾ ಪ್ರದೇಶದಿಂದ ಸುಮಾರು ಮೂರು ಕಿಲೋ ಗ್ರಾಂಗಳಷ್ಟು ಹೆರಾಯಿನ್ ಹೊಂದಿರುವ ಪ್ಯಾಕೆಟ್ ಅನ್ನು ವಶಕ್ಕೆ ಪಡೆದಿವೆ. ರಾತ್ರಿ ಸಂದರ್ಭದಲ್ಲಿ ಇಲ್ಲಿ ಪಾಕಿಸ್ತಾನಿ ಡ್ರೋನ್ ಮಾದಕ ದ್ರವ್ಯಗಳನ್ನು ಬೀಳಿಸಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಂತ್ರಿಮಂಡಲ ಸಭೆ; ಸಚಿವ ಸಂಪುಟ ಪುನಾರಚನೆ ಚರ್ಚೆ ಸಾಧ್ಯತೆ
ಪ್ರಕರಣಕ್ಕೆ ಸಂಬಂಧಿಸಿ ಸ್ಥಳೀಯ ಸಂಪರ್ಕಗಳನ್ನು ಪತ್ತೆ ಹಚ್ಚಲು ವ್ಯಾಪಕ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಇದರಲ್ಲಿ ಭಾಗಿಯಾಗದವರನ್ನು ಗುರುತಿಸಲು ಮತ್ತು ಡ್ರೋನ್ ಹಾರಾಟದ ಮಾರ್ಗವನ್ನು ತಿಳಿಯಲು ತಾಂತ್ರಿಕ ಕಣ್ಗಾವಲು ವ್ಯವಸ್ಥೆಗಳನ್ನು ಇರಿಸಲಾಗಿದೆ. ವಶಕ್ಕೆ ಪಡೆದಿರುವ ವಸ್ತುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.