ED Raid: ಸೀಟು ಬ್ಲಾಕಿಂಗ್ ದಂಧೆ, ಇಂಜಿನಿಯರಿಂಗ್ ಕಾಲೇಜುಗಳ ಮೇಲೆ ಇಡಿ ದಾಳಿ
E Raid: ಇಂಜಿನಿಯರಿಂಗ್ ಸೀಟ್ಗಳ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಕಾಲೇಜು ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಇಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂದು KEA ಅಧಿಕಾರಿಗಳು ಆರೋಪ ಮಾಡಿದ್ದಾರೆ ಎನ್ನಲಾಗುತ್ತಿದೆ.


ಬೆಂಗಳೂರು: ಇಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಜಾರಿ ನಿರ್ದಶನಾಲಯದ ಅಧಿಕಾರಿಗಳು ಕೆಲವು ಕಾಲೇಜುಗಳ (engineering college) ಮೇಲೆ ದಾಳಿ (ED Raid) ನಡೆಸಿದ್ದು, ಶೋಧ ಮುಂದುವರಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಖಾಸಗಿ ಕಾಲೇಜುಗಳ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ 18 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್ ಇಂಜಿನಿಯರಿಂಗ್ ಹಾಗೂ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ED ಅಧಿಕಾರಿಗಳು ದಾಳಿ ನಡೆಸಿ ಶೋಧ ಮುಂದುವರಿಸಿದ್ದಾರೆ.
ಇಂಜಿನಿಯರಿಂಗ್ ಸೀಟ್ಗಳ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಕಾಲೇಜು ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಇಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂದು KEA ಅಧಿಕಾರಿಗಳು ಆರೋಪ ಮಾಡಿದ್ದಾರೆ ಎನ್ನಲಾಗುತ್ತಿದೆ.
ಈ ಸಂಬಂಧ KEA ಅಧಿಕಾರಿಗಳು ಈ ಹಿಂದೆಯೇ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಸಾಕಷ್ಟು ಕಾಲೇಜುಗಳಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ಸಹ ನೀಡಿದ್ದರು. KEA ಪಟ್ಟಿಯಂತೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಆಗುತ್ತಿಲ್ಲ. ಲಕ್ಷ ಲಕ್ಷ ಹಣಕ್ಕೆ ಕಾಲೇಜು ಆಡಳಿತ ಮಂಡಳಿ ಸೀಟುಗಳನ್ನು ಬ್ಲಾಕ್ ಮಾಡ್ತಿವೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಮತ್ತು ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ವಿಚಾರವಾಗಿ ಕೇಳಿ ಬಂದ ಆರೋಪದ ಹಿನ್ನೆಲೆ ಇಡಿ ದಾಳಿ ನಡೆಸಿದೆ.
ಇದನ್ನೂ ಓದಿ: DK Shivakumar: ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ ಎಂದ ಡಿ.ಕೆ.ಶಿವಕುಮಾರ್