ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kalaburagi Murder: ಕಲಬುರಗಿಯಲ್ಲಿ ಮಾಜಿ ಸಚಿವರ ಸಂಬಂಧಿಕನ ಕೊಚ್ಚಿ ಕೊಲೆ

ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದ ಅನಿಲ ರಾಠೋಡ್‌ನನ್ನು ಹಣಕಾಸಿನ ವಿಚಾರಕ್ಕೆ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿರುವ ಮೃತ ಅನಿಲನ ಕಚೇರಿಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.

ಕಲಬುರಗಿಯಲ್ಲಿ ಕೊಲೆ

ಕಲಬುರಗಿ, ಏ.03: ಕಲಬುರಗಿಯಲ್ಲಿ (Kalaburagi) ಮತ್ತೆ ನೆತ್ತರು ಹರಿದಿದ್ದು, ಮಾಜಿ ಸಚಿವರ ಸಂಬಂಧಿಕರೊಬ್ಬರನ್ನು ರಸ್ತೆಯಲ್ಲೇ ಕೊಚ್ಚಿ ಕೊಲ್ಲಲಾಗಿದೆ. ಕಲಬುರಗಿ ನಗರದ ಪಿ & ಟಿ ಕಾಲೋನಿ ಬಳಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ಬಳಿ ತಡರಾತ್ರಿ ಈ ಭೀಕರ ಹತ್ಯೆ (Murder case) ನಡೆದಿದೆ ಎಂದು ತಿಳಿದು ಬಂದಿದೆ. ಮಾಜಿ ಸಚಿವ ರೇವೂನಾಯಕ ಬೆಳಮಗಿ ಸಂಬಂಧಿಕನಾದ ಅನಿಲ ರಾಠೋಡ್ (45) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ವರದಿ ಆಗಿದೆ.

ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದ ಅನಿಲ ರಾಠೋಡ್‌ನನ್ನು ಹಣಕಾಸಿನ ವಿಚಾರಕ್ಕೆ ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿರುವ ಮೃತ ಅನಿಲನ ಕಚೇರಿಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.

ಈ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸ್​​ ಆಯುಕ್ತ ಡಾ.ಶರಣಪ್ಪ ಹಾಗೂ ಹಿರಿಯ ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕೊ ಟೀಮ್, ಡಾಗ್ ಸ್ಕ್ವಾಡ್‌ನಿಂದಲೂ ತೀವ್ರ ಪರಿಶೀಲನೆ ನಡೆದಿದೆ.

Murder Case: ಸ್ನೂಕರ್‌ ಸ್ಟಿಕ್‌ನಲ್ಲಿ ಹೊಡೆದು ಹೆಡ್‌ಕುಕ್‌ ಹತ್ಯೆ, ಹೆಣ ಸಾಗಿಸುವಾಗ ಸಿಕ್ಕಿಬಿದ್ದ ಹೋಟೆಲ್‌ ಮಾಲಿಕ

ಹರೀಶ್‌ ಕೇರ

View all posts by this author