ಮಧ್ಯಮಗ್ರಾಮ್: ಶಾಲೆಯೊಂದರ ಹೊರಗೆ ಬ್ಯಾಗ್ ಸ್ಪೋಟಗೊಂಡು (near school explosion) ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ (west bengal) ನಡೆದಿದೆ. ಮಧ್ಯಮಗ್ರಾಮ್ ರೈಲ್ವೆ ನಿಲ್ದಾಣದ (Madhyamgram High School) ಬಳಿಯ ಶಾಲೆಯ ಪ್ರವೇಶದ್ವಾರದ ಹೊರಗೆ ಮಧ್ಯರಾತ್ರಿಯ ಸುಮಾರಿಗೆ ಸ್ಫೋಟ ಸಂಭವಿಸಿದೆ. ಉತ್ತರ ಪ್ರದೇಶದ ನಿವಾಸಿ ಸಚ್ಚಿದಾನಂದ ಮಿಶ್ರಾ ಎಂಬಾತ ಬ್ಯಾಗ್ ಅನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಬ್ಯಾಗ್ ನಲ್ಲಿ ಸ್ಪೋಟಕ ವಸ್ತುಗಳು ಇದ್ದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
ಉತ್ತರ ಪ್ರದೇಶದ ಸಚ್ಚಿದಾನಂದ ಮಿಶ್ರಾ ಎಂಬಾತ ತೆಗೆದುಕೊಂಡು ಹೋಗುತ್ತಿದ್ದ ಬ್ಯಾಗ್ ಸ್ಪೋಟಗೊಂಡು ಆತ ಸಾವನ್ನಪ್ಪಿದ್ದಾನೆ. ಭಾನುವಾರ ತಡರಾತ್ರಿ ಮಧ್ಯಮಗ್ರಾಮ್ ಪ್ರೌಢಶಾಲೆಯ ಹೊರಗೆ ಈ ಘಟನೆ ನಡೆದಿದೆ. ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಗಂಭೀರವಾಗಿ ಗಾಯಗೊಂಡ ಮಿಶ್ರಾನನ್ನು ಕೂಡಲೇ ಬರಾಸತ್ ವೈದ್ಯಕೀಯ ಕಾಲೇಜಿಗೆ ದಾಖಲಾಯಿಸಲಾಯಿತು. ಬಳಿಕ ಆತನನ್ನು ಕೋಲ್ಕತ್ತಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಆತ ಸೋಮವಾರ ಬೆಳಗ್ಗೆ ನಿಧನರಾಗಿದ್ದಾನೆ. ಸ್ಫೋಟದ ತೀವ್ರತೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಿಶ್ರಾ ಜೊತೆ ಬೇರೆ ಯಾರಾದರೂ ಇದ್ದಾರೆಯೇ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆ.
ಸ್ಫೋಟದ ಕುರಿತು ಮಾಹಿತಿ ತಿಳಿದ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿತ್ತು. ಬಾಂಬ್ ನಿಷ್ಕ್ರಿಯ ದಳ ಮತ್ತು ವಿಧಿವಿಜ್ಞಾನ ತಜ್ಞರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ಸ್ಥಳದಲ್ಲಿದ್ದ ಬ್ಯಾಗ್, ಮೊಬೈಲ್ ಚಾರ್ಜರ್ ಮತ್ತು ಬಟ್ಟೆಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಗೆ ಮುಂದಾಗಿದೆ. ಅಧಿಕಾರಿಗಳು ಸ್ಫೋಟ ಸ್ಥಳ ಮತ್ತು ಬರಾಸತ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಧಿವಿಜ್ಞಾನ ವರದಿಗಾಗಿ ಕಾಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ: Bomb Threat: ಮತ್ತೆ ಶಾಲೆಗಳಿಗೆ ಬಾಂಬ್ ಬೆದರಿಕೆ; ಕೆಲ ಹೊತ್ತು ಆತಂಕ!
ಪ್ರಕರಣದ ಕುರಿತು ಮಾತನಾಡಿದ ಬರಾಸತ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅತಿಶ್ ಬಿಸ್ವಾಸ್, ಸ್ಫೋಟದ ಸ್ವರೂಪವನ್ನು ಇನ್ನೂ ಗುರುತಿಸಲಾಗಿಲ್ಲ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ತಿಳಿಸಿದ್ದಾರೆ.