ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಯಲ್ಲಾಪುರದ ಅರಬೈಲ್‌ ಘಾಟ್‌ನಲ್ಲಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಗ್ರಹ ಚಿತ್ರ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ (Arabail Ghat) ಬಳಗಾರ್ ಬಳಿ ಲಾರಿ ಹಾಗೂ ತೂಫಾನ್ ಕಮರ್ಷಿಯಲ್ ವಾಹನದ (Road Accident) ನಡುವೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ 'ಸ್ವಿಗ್ಗಿಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

​ಧಾರವಾಡದಿಂದ ರಾತ್ರಿ ವೇಳೆ ಧರ್ಮಸ್ಥಳ ಹಾಗೂ ಮಂಗಳೂರು ಕಡೆಗೆ ಪ್ರವಾಸ ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ತೂಫಾನ್ ವಾಹನದಲ್ಲಿ (KA19AA5920) ಚಾಲಕ ಸೇರಿದಂತೆ ಒಟ್ಟು 9 ಜನರಿದ್ದರು. ಅರಬೈಲ್ ಘಾಟ್‌ನ ಬಳಗಾರ್ ತಲುಪುತ್ತಿದ್ದಂತೆ ತೂಫಾನ್ ವಾಹನ ಹಾಗೂ ಲಾರಿ (KA22AA1008) ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೂಫಾನ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರನ್ನು ​ಬಸವರಾಜ್ (48 ವರ್ಷ), ​ಅಭಿಷೇಕ್ ಈಶ್ವರ್ (28 ವರ್ಷ), ​ಅಕ್ಷಯ (26 ವರ್ಷ), ​ಅಭಿಷೇಕ್ (26 ವರ್ಷ), ​ಸಂಜೀವ/ಸಂಜಯ ಅಂಗಡಿ (33 ವರ್ಷ - ವಾಹನ ಚಾಲಕ), ​ಮಂಜುನಾಥ ಚುಲಕಿ (32 ವರ್ಷ) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯಕ್ಕೆ ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Horrific road accident: ಭೀಕರ ರಸ್ತೆ ಅಪಘಾತ: ಲಾರಿಗೆ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಪ್ರವಾಸಕ್ಕೆಂದು ಹೋಗಿದ್ದ ಯುವಕರು ಹೆಣವಾಗಿ ಮರಳಿದ ಸುದ್ದಿ ಕೇಳಿ ಧಾರವಾಡದಲ್ಲಿರುವ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Vishakha Bhat Heggar

View all posts by this author