ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Mysuru Tragedy: ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಘೋರ ದುರಂತ; ಡೆತ್‌ ನೋಟ್‌ ಬರೆದು ತಂದೆ, ತಾಯಿ, ಮಗಳು ಆತ್ಮಹತ್ಯೆ!

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ. ಯುವತಿಯೊಬ್ಬಳ ವಿವಾಹಕ್ಕೆ ಕೇವಲ ಎರಡು ದಿನ ಬಾಕಿ ಇತ್ತು. ಆದರೆ, ಮದುವೆ ತಯಾರಿಯ ಸಂಭ್ರಮದಲ್ಲಿದ್ದ ಕುಟುಂಬವೇ ದುರಂತ ಅಂತ್ಯ ಕಂಡಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.

ಮೈಸೂರಿನಲ್ಲಿ ಘೋರ ದುರಂತ; ತಂದೆ, ತಾಯಿ, ಮಗಳು ಆತ್ಮಹತ್ಯೆ!

-

Prabhakara R
Prabhakara R Jun 22, 2026 7:15 PM

ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Mysuru Tragedy) ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ತಂದೆ ಶಿವಣ್ಣ (54), ತಾಯಿ ನಾಗರತ್ನ (44) ಹಾಗೂ ಮಗಳು ರಕ್ಷಿತಾ (21) ಆತ್ಮಹತ್ಯೆಗೆ ಶರಣಾದವರು.

ಮನೆಯಲ್ಲಿ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ ತಮ್ಮ ಸಾವಿಗೆ ಉಲ್ಲಾಸ್ ಗೌಡ ಕಾರಣ ಎಂದು ಬರೆಯಲಾಗಿದೆ. ಮೂರು ತಿಂಗಳ ಹಿಂದೆ ಯುವತಿ ರಕ್ಷಿತಾಗೆ ಬೇರೆ ಯುವಕನೊಂದಿಗೆ ಮದುವೆ ನಿಶ್ಚಯವಾಗಿತ್ತು. ಅವರ ನಿಶ್ಚಿತಾರ್ಥದ ಸಮಯದಲ್ಲೂ ಉಲ್ಲಾಸ್ ಗೌಡ ಓಡಾಡಿಕೊಂಡಿದ್ದ. ಜೂನ್‌ 23-24ರಂದು ಮದುವೆ ನಿಗದಿಯಾಗಿತ್ತು. ಆದರೆ ಒಂದು ವಾರದ ಹಿಂದಷ್ಟೇ ಉಲ್ಲಾಸ್ ರಕ್ಷಿತಾಳನ್ನು ಲವ್ ಮಾಡುತ್ತಿದ್ದೇನೆ, ಮದುವೆ ಮಾಡಿಕೊಡಿ ಎಂದು ಆಕೆಯ ಪೋಷಕರ ಬಳಿ ಕೇಳಿದ್ದ. ಆಗ ಬೈದು ಬುದ್ದಿಮಾತು ಹೇಳಿದ್ದರು. ಅವರ ಮಾತು ಕೇಳದೇ ಗಲಾಟೆ ಮಾಡಿದ್ದ. ರಾತ್ರಿ ಗ್ರಾಮದಲ್ಲಿ ಹಿರಿಯರನ್ನು ಸೇರಿಸಿ ನ್ಯಾಯ ಪಂಚಾಯತಿ ಮಾಡಿದ್ದರು.

ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು, ಸಿಗರೇಟ್‌ನಿಂದ ಸುಟ್ಟ ಕಾಮುಕನ ಎನ್‌ಕೌಂಟರ್‌; ಯೋಗಿ ನಾಡಲ್ಲಿ ಮುಂದುವರಿದ ದುಷ್ಕರ್ಮಿಗಳ ಬೇಟೆ

ಅದಾದ ಬಳಿಕ ಈ ಹಿಂದೆ ರಕ್ಷಿತಾ ತನಗೆ ಕಳುಹಿಸಿದ್ದ ಕೆಲವು ಮೆಸೇಜ್ ಹಾಗೂ ಫೋಟೋಗಳನ್ನು ಇಟ್ಟುಕೊಂಡು ಆಕೆಗೆ ನಿರಂತರವಾಗಿ ಮಾನಸಿಕ ಹಿಂಸೆ ಹಾಗೂ ಕಿರುಕುಳ ನೀಡುತ್ತಿದ್ದ. ಅಷ್ಟಕ್ಕೇ ನಿಲ್ಲಿಸದೇ ರಕ್ಷಿತಾಳ ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಆ ಮೆಸೇಜ್ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಇದರಿಂದ ಅವಮಾನಕ್ಕೊಳಗಾದ ಕುಟುಂಬಸ್ಥರು ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ವರುಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.